ರಾಜ್ಯದಲ್ಲಿ 27ಕ್ಕೇರಿದ ಕೊರೋನಾ ಪೀಡಿತರ ಸಂಖ್ಯೆ: ಆರೋಗ್ಯ ಸಚಿವ ಬಿ. ಶ್ರೀರಾಮುಲು

0
77

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಇಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೇರಿದೆ.

ಇಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ದೃಢೊಪಟ್ಟಿದ್ದು, ಇದೀಗ ರಾಜ್ಯದಲ್ಲಿ ಸಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಕೊರೋನಾ ಸೋಂಕಿನ ವಿರುದ್ಧ ಹೊರಾಡಲು ರಾಜ್ಯ ಸಿದ್ಧವಾಗಿದೆ. ರಾಜ್ಯ ಸರ್ಕಾರ ಈಗಾಗಲೇ 10ಲಕ್ಷ ಮಾಸ್ಕ್ ಗಳನ್ನು ಖರೀದಿಸಲು ಮುಂದಾಗಿದ್ದು, 5 ಲಕ್ಷ ವೈಯಕ್ತಿಕ ರಕ್ಷಣಾ ಸಾಧಕಗಳನ್ನು ಖರೀದಿಸಲು ನಿರ್ಧರಿಸಿದೆ. ಅಧಿಕಾರಿಗಳೊಂದಿಗೆ ಸಭೆ ಮತ್ತು ಸ್ಕ್ಯಾನ್ ರೇ ಕಂಪನಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, 1000 ವೆಂಟಿಲೇಟರ್ ಖರೀದಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಸಾರ್ವಜಿನಿಕರು ಸಾಮಾಜಿಕ ಅಂತರವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ವಿನಂತಿಸಿಕೊಂಡರು.

ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಅವರು, ಸಾರ್ವಜನಿಕರು ಅನಗತ್ಯ ಮನೆಯಿಂದ ಹೊರಗೆ ಬರುವುದು ಬೇಡ, ಜನರಿಗಾಗಿ ಈಗಾಗಲೆ 24 ಗಂಟೆಗಳ ಕಾಲ ವಿದ್ಯುತ್ ನೀಡಲಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here