ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಹಿನ್ನಲೆ ಸರ್ಕಾರ ಉಚಿತವಾಗಿ ವಲಸೆ ಕಾರ್ಮಿಕರನ್ನು ತಮ್ಮ ಊರುಗಳಿಗೆ ಶಿಫ್ಟ್ ಮಾಡಿದೆ.
ಕಳೆದ 3 ದಿನಗಳಿಂದ ವಲಸೆ ಕಾರ್ಮಿಕರಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿದೆ. ಈ ವರೆಗೂ ರಾಜ್ಯದಲ್ಲಿನ 59,880 ವಲಸೆ ಕಾರ್ಮಿಕರನ್ನು ತಮ್ಮ ಊರುಗಳಿಗೆ ಶಿಫ್ಟ್ ಮಾಡಿಸಿದೆ.
ರಾಜ್ಯದಲ್ಲಿ ಲಾಖ್ ಡೌನ್ 3.0 ವಿಸ್ತರಣೆ ಜೊತೆಗೆ ಜನರಿಗೆ ಸ್ವಲ್ಪ ರಿಲೀಫ್ ನೀಡಿದ ಸರ್ಕಾರ ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದ ವಲಸೆ ಕಾರ್ಮಿಕರನ್ನು ತಮ್ಮ ಊತರಿಗೆ ಕಳುಹಿಸುವ ಕಾರ್ಯದಲ್ಲಿ ಸಾರಿಗೆ ಇಲಾಖೆ ನಿರತವಾಗಿದೆ. ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದಲ್ಲಿರುವ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸುವ ನಿಟ್ಟಿನಲ್ಲೆ ಸರ್ಕಾರ ವಿವಿಧ ರಾಜ್ಯಗಳ ವಲಸೆ ಕಾರ್ಮಿಕರ ನೆರವಿಗಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಗೋವಾ, ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್ ನ ವಲಸೆ ಕಾರ್ಮಿಕರಿಗಾಗಿ ನೋಡಲ್ ಅಧಿಕಾರಿಗಳು ನೇಮಿಸಲಾಗಿದೆ.