Tuesday, June 28, 2022

Latest Posts

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳು ಭಾರೀ ಮಳೆಯಾಗುವ ಸಾಧ್ಯತೆ: ಹವಮಾನ ಇಲಾಖೆ ಮಾಹಿತಿ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಮುಂದಿನ ಎರಡು ದಿನಗಳು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss