ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಇಂದು ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.