ಹೊಸದಿಗಂತ ಆನ್ ಲೈನ್ ಡೆಸ್ಕ್:
ವಿಜಯನಗರ ಜಿಲ್ಲೆ ಸ್ಥಾಪನೆಗೆ ಕೊನೆಗೂ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಕರ್ನಾಟಕದ 31ನೇ ಜಿಲ್ಲೆಯಾಗಿ ‘ವಿಜಯನಗರ’ ಸೇರ್ಪಡೆಯಾಗಲಿದೆ.
ಸಚಿವ ಆನಂದ್ ಸಿಂಗ್ ಅವರ ಬೇಡಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ಸಿಕ್ಕಿದೆ. ಬಳ್ಳಾರಿ ಜಿಲ್ಲೆಯಿಂದ ವಿಭಜನೆಯಾಗಿ ವಿಜಯನಗರ ಹೊಸ ಜಿಲ್ಲೆಯಾಗಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆ ಸ್ಥಾಪನೆಗೆ ಅನುಮೋದನೆ ಸಿಗಲಿದ್ದು, ಅಧಿಕೃತ ಘೋಷಣೆ ಮಾಡಲಾಗುತ್ತದೆ ಎಂದು ಸಚಿವ ಮಾಧು ಸ್ವಾಮಿ ತಿಳಿಸಿದ್ದಾರೆ.