Saturday, July 2, 2022

Latest Posts

ರಾಜ್ಯದ RAF ಘಟಕದ ಅಡಿಗಲ್ಲು ಫಲಕದಲ್ಲಿ ಕನ್ನಡ ಇಲ್ಲ: ಮಾಜಿ ಸಿಎಂ ಹೆಚ್’ಡಿಕೆ ಆಕ್ರೋಶ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಶಿವಮೊಗ್ಗದ ಭದ್ರಾವತಿಯಲ್ಲಿ RAF ಘಟಕ ಶಂಕುಸ್ಥಾಪನೆ ನೆರವೇರಿಸಿದ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಡಿಗಲ್ಲು ಫಲಕದಲ್ಲಿ ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿದ್ದು, ಇದು ಕನ್ನಡಕ್ಕೆ ಅವಮಾನ ಮಾಡಿದಂತಾಗಿದೆ ಎಂದು ಹೆಚ್ ಡಿಕೆ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ಆರೋಪಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss