Tuesday, June 28, 2022

Latest Posts

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೆ. ನಾರಾಯಣ ನಾಮಪತ್ರ ಸಲ್ಲಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾದಿಂದ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಂದ ತೆರವಾದ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕೆ.ನಾರಾಯಣ್ ಅವರು ಇಂದು ನಾಮಪತ್ರ ಸಲ್ಲಿಸಿದರು.
ರಾಜ್ಯದ 1 ರಾಜ್ಯಸಭಾ ಸ್ಥಾನಕ್ಕೆ ಚುನಾವಣಾ ಆಯೋಗವು ಡಿಸೆಂಬರ್ 1ಕ್ಕೆ ಉಪ ಚುನಾವಣೆ ಘೋಷಣೆ ಮಾಡಿತ್ತು. ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನವಾಗಿತ್ತು. ಬಿಜೆಪಿಯಿಂದ ಅಭ್ಯರ್ಥಿಯಾಗಿ ಡಾ.ಕೆ.ನಾರಾಯಣ ಅವರು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ತೋಟಗಾರಿಕೆ ಸಚಿವ ನಾರಾಯಣ ಗೌಡ, ಶಾಸಕ ಸುನಿಲ್ ಕುಮಾರ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss