Monday, August 8, 2022

Latest Posts

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನಕ್ಕೆ ಬಿಜೆಪಿಯಿಂದ ಶ್ರದ್ಧಾಂಜಲಿ

ಮಂಡ್ಯ : ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ನಿಧನಕ್ಕೆ ನಗರದ ಜಿಲ್ಲಾ ಬಿಜೆಪಿ ಕಚೇರಿ ವಿಕಾಸ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ. ವಿಜಯಕುಮಾರ್ ಮಾತನಾಡಿ, ಇತ್ತೀಚೆಗೆಗಷ್ಟೇ ರಾಜ್ಯಸಭಾ ಸದ್ಯಸ್ಯರಾಗಿದ್ದ ಅಶೋಕ್ ಗಸ್ತಿ ಅವರು ಹಿಂದುಳಿದ ವರ್ಗದಿಂದ ಬಂದವರಾಗಿದ್ದಾರೆ. ಪಕ್ಷದ ಸಂಘಟನೆಯಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಅವರು, ಹಿಂದುಳಿದವರು, ಶೋಷಿತರ ಅಭಿವೃದ್ಧಿಗೆ ಅಪಾರವಾಗಿ ಶ್ರಮಿಸಿದ್ದರು ಎಂದು ಹೇಳಿದರು.
ರಾಜ್ಯಸಭಾ ಸದಸ್ಯರಾಗಿ ಅವರಿಂದ ಅಪಾರ ಕೊಡುಗೆಯನ್ನು ರಾಜ್ಯಕ್ಕೆ ನಾವೆಲ್ಲ ಬಯಸಿದ್ದೆವು. ಆದರೆ ವಿಧಿ ಅದಕ್ಕೆಲ್ಲ ಅವಕಾಶ ಕೊಡಲಿಲ್ಲ ಎಂದು ನೊಂದು ನುಡಿದರು.
ಅಶೋಕ ಗಸ್ತಿ ಅವರು ಬಿಜೆಪಿ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾಗಿ, ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಅಧ್ಯಕ್ಷರಾಗಿ ಗುರುತರವಾಗಿ ಸೇವೆ ಸಲ್ಲಿಸಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಹಿಂದುಳಿದ ವರ್ಗಗಳ , ದುರ್ಬಲರ , ಅಶಕ್ತರ ಏಳಿಗೆಗಾಗಿ ಶ್ರಮಿಸಿದ್ದಾರೆ ಎಂದು ತಿಳಿಸಿದರು.
ಸಂಘದ ಸ್ವಯಂ ಸೇವಕರಾಗಿ, ಎಬಿವಿಪಿ ಕಾರ್ಯಕರ್ತರಾಗಿ, ಬಳ್ಳಾರಿ, ರಾಯಚೂರು, ಕೊಪ್ಪಳ ಪ್ರಬಾರಿಗಳಾಗಿ ಕೆಲಸ ಮಾಡಿದ್ದರು. ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರಾವಾಸ ಮಾಡುತ್ತಿದ್ದರು, ಪಕ್ಷಕ್ಕಾಗಿ ತಮ್ಮೆಲ್ಲಾ ಸಮಯವನ್ನೂ ಮೀಸಲಿಟ್ಟು ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಮೈಸೂರಿಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಮಂಡ್ಯದಲ್ಲೂ ಪಕ್ಷದ ಕಾರ್ಯಕರ್ತರೊಟ್ಟಿಗೆ ಚರ್ಚಿಸಿ ಸಂಘಟನೆ ಬಗ್ಗೆ ಮಾಹಿತಿ ಕಲೆ ಹಾಕಿದ್ದರು, ಸಂಘಟನೆ ಯಾವ ರೀತಿ ನಡೆಸಬೇಕು ಎಂಬುದರ ಬಗ್ಗೆಯೂ ಕಾರ್ಯಕರ್ತರಿಗೆ ಸಲಹೆ ನೀಡಿದ್ದರು ಎಂದು ಹೇಳಿದರು.
ಅವರ ನಿಧನದಿಂದ ಪಕ್ಷದ ಮತ್ತು ಹಿಂದುಳಿದ ವರ್ಗಗದವರಿಗೆ ತುಂಬಲಾರದ ನಷ್ಟಉಂಟಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ನೀಡಿ, ಅವರ ಕುಟುಂಬ ಪರಿವಾರ ಹಾಗೂ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಅವರು ತಿಳಿಸಿದರು.
ಬಿಜೆಪಿ ಮುಖಂಡರಾದ ಸಾಯಿ ರವೀಂದ್ರ, ರಮೇಶ್, ವಿವೇಕ್, ನಾಗರಾಜು, ಮಹೇಶ್, ಆರ್ಮುಗಂ ಕಿಶೋರ್, ವಸಂತ, ಸುರೇಶ, ಕ್ರಾಂತಿ ಮಂಜು, ನಿತ್ಯಾಂದ ಸೇರಿದಂತೆ ಇತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss