Sunday, June 26, 2022

Latest Posts

ರಾಜ್ಯಸಭೆಗೆ ಕೆ. ನಾರಾಯಣ್ ಅವಿರೋಧ ಆಯ್ಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಅಶೋಕ್​ ಗಸ್ತಿ ನಿಧನದಿಂದ ತೆರವಾಗಿದ್ದ ರಾಜ್ಯಸಭೆ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕೆ.ನಾರಾಯಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೆ.ನಾರಾಯಣ್ ವಿರುದ್ಧ ಯಾವುದೇ ಅಭ್ಯರ್ಥಿ ಸ್ಪರ್ಧಿಸದ ಹಿನ್ನೆಲೆ ಇಂದು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ವಿಧಾನಸಭಾ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರಿಂದ ಕುಟುಂಬ ಸಮೇತರಾಗಿ ಪ್ರಮಾಣ ಪತ್ರ ಸ್ವೀಕಾರ ಮಾಡಿದ್ದಾರೆ.
ಗಸ್ತಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿಸೆಂಬರ್ 1ರಂದು ಮತದಾನ ನಡೆಸಲು ದಿನಾಂಕವನ್ನೂ ಘೋಷಣೆ ಮಾಡಲಾಗಿತ್ತು. ಬಿಜೆಪಿ ಅಭ್ಯರ್ಥಿಯಾಗಿ ಮಂಗಳೂರು ಮೂಲದ ಉದ್ಯಮಿ ನಾರಾಯಣ್ ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಸೋಮವಾರ ಕೆ.ನಾರಾಯಣ್​ ಅವರ ಆಯ್ಕೆಯನ್ನು ವಿಧಾನಸಭೆ ಕಾರ್ಯದರ್ಶಿ ವಿಶಾಲಾ ಪ್ರಕಟಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss