Sunday, August 14, 2022

Latest Posts

ರಾಜ್ಯಸಭೆಯಲ್ಲಿ ನಡೆದ ಘಟನೆ ದುಃಖಕರ, ದುರದೃಷ್ಟಕರ, ನಾಚಿಕೆಗೇಡಿನ ಸಂಗತಿ: ರಾಜನಾಥ್ ಸಿಂಗ್ ಅಸಮಾಧಾನ

ಹೊಸದಿಲ್ಲಿ : ರಾಜ್ಯಸಭೆಯಲ್ಲಿ ಕೃಷಿ ಸಂಬಂಧಿ ಮಸೂದೆಗಳ ಮಂಡನೆ ವೇಳೆ ನಡೆದ ಘಟನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ಸದನದಲ್ಲಿ ನಡೆದ ಘಟನೆ ದುಃಖಕರ, ದುರದೃಷ್ಟಕರ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸದನದಲ್ಲಿ ಚರ್ಚೆ ಮಾಡುವುದು ಆಡಳಿತ ಪಕ್ಷದ ಜವಾಬ್ದಾರಿಯಾಗಿದೆ. ಇದರಲ್ಲಿ ಪ್ರತಿಪಕ್ಷಗಳು ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದರ ಜೊತೆಗೆ ನನಗೆ ತಿಳಿದ ಮಟ್ಟಿಗೆ ಇದು ಲೋಕಸಭೆ ಅಥವಾ ರಾಜ್ಯಸಭೆಯ ಇತಿಹಾಸದಲ್ಲಿ ಈ ರೀತಿಯ ಘಟನೆ ಎಂದಿಗೂ ಸಂಭವಿಸಿಲ್ಲ. ವಿಪಕ್ಷಗಳು ವದಂತಿಗಳ ಆಧಾರದ ಮೇಲೆ ರೈತರನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಯುತ್ತಿವೆ ಎಂದು ಹೇಳಿದ್ದಾರೆ . ಈಗ ಮಂಡಿಸಿರುವ ಕಾಯ್ದೆಗಳಿಂದ ರೈತರಿಗೆ ಒಳ್ಳೆಯದಾಗುವುದು, ಈಗಾಗಲೇ ಅಧ್ಯಕ್ಷರು ನೋಟಿಸ್ ಜಾರಿ ಮಾಡಲಾಗಿದ್ದು, ಅವರು ಕ್ರಮ ಕೈಗೊಳ್ಳುತ್ತಾರೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss