Thursday, June 30, 2022

Latest Posts

ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಬ್ರೇಕ್!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ರೂಪಾಂತರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಜ.2 ರವರೆಗೆ ನೈಟ್​ ಕರ್ಫ್ಯೂ ಜಾರಿಯಲ್ಲಿದ್ದು, ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಯೂ ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಬಂದ್ ಆಗಲಿದೆ.

ಹೀಗಾಗಿ ಕ್ರಿಸ್ ಮಸ್ ಹಾಗೂ ನ್ಯೂ ಇಯರ್ ಸೆಲಬ್ರೆಷನ್ ಗೆ ಬ್ರೇಕ್ ಬಿದ್ದಂತೆ ಆಗಿದೆ. ಈ ಸಂಬಂಧ ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಸರ್ಕಾರ ಸಂಜೆ ಬಿಡುಗಡೆ ಮಾಡಲಿದೆ.

ಏನಿರಲಿದೆ?
ಆಸ್ಪತ್ರೆ, ಮೆಡಿಕಲ್ ಶಾಪ್, ವೈದ್ಯಕೀಯ ಸೇವೆ ಸೇರಿದಂತೆ ತುರ್ತು ಸೇವೆಗಳು ಮಾತ್ರ ರಾತ್ರಿ 10ರ ನಂತರ ಬೆಳಿಗ್ಗೆ 6 ಗಂಟೆಯವರೆಗೆ ಇರಲಿದೆ.

ಏನಿರಲ್ಲ?
ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್ ಶಾಪ್, ಸಾರಿಗೆ ಸಂಚಾರ ವ್ಯವಸ್ಥೆ ಸೇರಿದಂತೆ ಇನ್ನಿತರೆ ಸೌಲಭ್ಯಗಳು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಬಂದ್ ಆಗಲಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss