ಮಂಗಳೂರು: ರಾಜ್ಯದ ಉಪ ಚುನಾವಣೆ ಕಾವು ಬಿಸಿ ಏರಿದೆ. ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡಿರುವ ನಟಿ ಖುಷ್ಬೂ, ಇದೀಗ ರಾಜ್ಯದಲ್ಲಿ ನಡೆಯುವ ಶಿರಾ, ರಾಜರಾಜೇಶ್ವರಿನಗರ ಉಪ ಚುನಾವಣೆಯ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.
ಆರಂಭಿಕವಾಗಿ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಲಗ್ಗೆರೆಯಲ್ಲಿ ಪ್ರಚಾರ ನಡೆಸಿದ್ದಾರೆ.
ಗೆಲುವಿನ ಹಾದಿ ಹಿಡಿಯಲು ಶಿರಾ, ರಾಜರಾಜೇಶ್ವರಿನಗರ ಕ್ಷೇತ್ರಗಳಲ್ಲಿ ಗೆಲುವಿಗಾಗಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಇತ್ತ ಬಿಜೆಪಿ ಸ್ಟಾರ್ ಪ್ರಚಾರಕ್ಕೆ ಅಣಿಯಾಗಿದ್ದು, ನಟಿ ಖುಷ್ಬೂ ಬಿಜೆಪಿ ಅಭ್ಯರ್ಥಿ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.
ಇಂದು ನಟಿ ಖುಷ್ಬೂ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಲಗ್ಗರೆಯಲ್ಲಿ ರೋಡ್ ಶೋ ನಡೆಸುವ ಮೂಲಕ, ಮತ ಭೇಟೆಯಲ್ಲಿ ತೊಡಗಿದರು. ಬಿಜೆಪಿಯ ಅಭ್ಯರ್ಥಿ ಮುನಿರತ್ನಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.