Thursday, July 7, 2022

Latest Posts

ರಾಜ್ಯ ಕೈಗಾರಿಕ ಕ್ಷೇತ್ರದ ಉತ್ತೇಜನೆಗೆ ರಾಜ್ಯ ಬಜೆಟ್

ಬೆಂಗಳೂರು: ಸಣ್ಣ ಕೈಗಾರಿಕೆಗಳ ಅನುಕೂಲಕ್ಕಾಗಿ ರಾಜ್ಯ ಬಜೆಟ್ ನಲ್ಲಿ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಬಜೆಟ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

  • ರಾಜ್ಯದಲ್ಲಿ ಹೂಡಿಕೆದಾರರಿಗೆ ಉತ್ತೇಜನ ನೀಡಲು, ಕೈಗಾರಿಕೆ ಸ್ಥಾಪನೆಗೆ ಗುರುತಿಸುವ ಜಾಗದಲ್ಲಿ ನೇರವಾಗಿ ಭೂಮಾಲೀಕರಿಂದ ಭೂಮಿ ಖರೀದಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಕಾಯ್ದೆಗಳಿಗೆ ತಿದ್ದುಪಡಿಗೆ ಕ್ರಮ.
  • 2020ರ ನವೆಂಬರ್‍ನಲ್ಲಿ “ಇನ್‍ವೆಸ್ಟ್ ಕರ್ನಾಟಕ-2020” ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜನೆ.
  • “ಉತ್ಪನ್ನ ನಿರ್ದಿಷ್ಟ ಕೈಗಾರಿಕಾ ಕ್ಲಸ್ಟರ್ ಅಭಿವೃದ್ಧಿ” ಯೋಜನೆಯಡಿ ಶಿವಮೊಗ್ಗ ಜಿಲ್ಲೆಯಲ್ಲಿ “ಹೆಲ್ತ್ ಅಂಡ್ ವೆಲ್‍ನೆಸ್ ಕ್ಲಸ್ಟರ್” ಮತ್ತು ಧಾರವಾಡ ಜಿಲ್ಲೆಯಲ್ಲಿ “ಹೋಮ್ ಅಂಡ್ ಪರ್ಸನಲ್ ಕೇರ್ ಕನ್ಸ್ಯೂಮರ್ ಗೂಡ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್”ಸ್ಥಾಪನೆ.
  • ರಾಮನಗರ ತಾಲ್ಲೂಕಿನ ಹಾರೋಹಳ್ಳಿ 5ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ “ಎಲೆಕ್ಟ್ರಿಕ್ ವೆಹಿಕಲ್ಸ್ ಮತ್ತು ಎನರ್ಜಿ ಸ್ಟೋರೇಜ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್” ಸ್ಥಾಪನೆಗೆ 10 ಕೋಟಿ ರೂ. ಅನುದಾನ.
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹರಳೂರು-ಮುದ್ದೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ “ಡಿಫೆನ್ಸ್ ಅಂಡ್ ಏರೋಸ್ಪೇಸ್ ಎಕ್ಯುಪ್‍ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್”ಸ್ಥಾಪನೆ.
  • ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನಲ್ಲಿ ಕೈಗಾರಿಕಾ ವಸಾಹತು ಸ್ಥಾಪನೆ.
  • ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕೈಗಾರಿಕೆಗಳ ಸಹಯೋಗದೊಂದಿಗೆ “Centre for Smart Manufacturing” ಸ್ಥಾಪನೆಗೆ ಐದು ಕೋಟಿ ರೂ. ಅನುದಾನ.
  • ನಾರು ಆಧಾರಿತ ಉತ್ಪನ್ನಗಳ ಬಗ್ಗೆ ಅರಿವು ಮೂಡಿಸಲು ಮತ್ತು ವ್ಯಾಪಕ ಮಾರುಕಟ್ಟೆ ಒದಗಿಸಲು ಐದು ಕೋಟಿ ರೂ.ಗಳ ವೆಚ್ಚದಲ್ಲಿ “Coir Experience Centre” ಸ್ಥಾಪನೆ.
  • ತಿಪಟೂರಿನಲ್ಲಿ ‘ತೆಂಗು ಆಧಾರಿತ ಕೈಗಾರಿಕಾ ಪಾರ್ಕ್’ಅಭಿವೃದ್ಧಿ.
  • ಕೇಂದ್ರ ಸರ್ಕಾರದ “ಪವರ್‍ಟೆಕ್ಸ್ ಇಂಡಿಯಾದ ನೂಲು ನಿಧಿ ಯೋಜನೆ”ಯಡಿ ಕೇಂದ್ರ ಸರ್ಕಾರದ ವಂತಿಗೆ ಹಾಗೂ ರಾಜ್ಯ ಸರ್ಕಾರದ ಗರಿಷ್ಠ 50 ಲಕ್ಷ ರೂ. ಸಹಾಯಧನದೊಂದಿಗೆ ಎರಡು ಕೇಂದ್ರಗಳಲ್ಲಿ ನೂಲಿನ ಘಟಕ ಸ್ಥಾಪನೆ.
  • ಹೊಸ ಜವಳಿ ಮತ್ತು ಸಿದ್ಧ ಉಡುಪು ನೀತಿಯ ಪ್ರೋತ್ಸಾಹಕಗಳಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರ್ಪಡೆ.
  • ಹಾವೇರಿ ಜಿಲ್ಲೆಯ ಶಿಗ್ಗಾಂವಿ ಮತ್ತು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನೂತನ ಜವಳಿ ಪಾರ್ಕ್ ಪ್ರಾರಂಭ; 3000 ಉದ್ಯೋಗ ಸೃಷ್ಟಿ.
  • ರಾಜ್ಯದ ಜಿ.ಐ. ಟ್ಯಾಗ್ ಹೊಂದಿರುವ ಕೈಮಗ್ಗ ಬಟ್ಟೆ ಉತ್ಪನ್ನಗಳಿಗೆ ರಾಜ್ಯದ ಪ್ರತಿಷ್ಠಿತ “ಪ್ರಿಯದರ್ಶಿನಿ”ಬ್ರಾಂಡ್ ಮೂಲಕ ಮಾರುಕಟ್ಟೆ ಸೌಲಭ್ಯ.
  • ನೇಕಾರರ ಸಾಲ ಮನ್ನಾ ಯೋಜನೆ ಪೂರ್ಣಗೊಳಿಸಲು57 ಕೋಟಿ ರೂ. ಅನುದಾನ.
  • ಹಿಂದುಳಿದ ಪ್ರದೇಶಗಳು ಮತ್ತು ಟಯರ್-2 ಹಾಗೂ ಟಯರ್-3ರ ನಗರಗಳಿಗೆ ಬಂಡವಾಳ ಆಕರ್ಷಿಸುವ ನೂತನ ಕೈಗಾರಿಕಾ ನೀತಿ ಜಾರಿ. ಉದ್ಯೋಗ ಸೃಷ್ಟಿಗೆ ಆದ್ಯತೆ.
  • ರಾಜ್ಯದ ವ್ಯಾಪ್ತಿಯಲ್ಲಿ ಅಮೂಲ್ಯ ಖನಿಜಗಳ (High Value Minerals) ನಿಕ್ಷೇಪಗಳನ್ನು ಗುರುತಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕೇಂದ್ರ ಕಛೇರಿಯಲ್ಲಿ ಖನಿಜಾನ್ವೇಷಣೆ ವಿಭಾಗ ಸ್ಥಾಪನೆ.
  • KIADB ಹಾಗೂ KSSIDC ಸಂಸ್ಥೆಗಳ ಮುಖ್ಯ ಸೇವೆಗಳು “ಸಕಾಲ”ದ ವ್ಯಾಪ್ತಿಗೆ ಸೇರ್ಪಡೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss