Saturday, July 2, 2022

Latest Posts

ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಿಂದ ಕೂಡಿಗೆ ಕ್ರೀಡಾ ಶಾಲೆ ಪರಿಶೀಲನೆ

ಹೊಸದಿಗಂತ ವರದಿ,ಕುಶಾಲನಗರ:

ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ. ಪುರುಷೋತ್ತಮ್ ಅವರು ಕೂಡಿಗೆ ಸರಕಾರಿ ಕ್ರೀಡಾ ಪ್ರೌಢಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕ್ರೀಡಾ ಶಾಲಾ ವಿಧ್ಯಾರ್ಥಿಗಳಿಗೆ ಬಹು ಮುಖ್ಯವಾಗಿ ಬೇಕಾಗುವ ಹಾಕಿ ಟರ್ಫ್ ಮೈದಾನವನ್ನು ವೀಕ್ಷಿಸಿದ ಅವರು, ಮೈದಾನದ ಉಳಿದಿರುವ ಕಾಮಗಾರಿಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಿ ವಿದ್ಯಾರ್ಥಿಗಳ ಉಪಯೋಗಕ್ಕೆ ಬಿಟ್ಟುಕೊಡುವಂತೆ ರಾಜ್ಯ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಉಪಾಧ್ಯಕ್ಷರು ಕ್ರೀಡಾ ಶಾಲೆಯ 400 ಮೀಟರ್ ಓಟದ ಅಥ್ಲೆಟಿಕ್ಸ್ ಮೈದಾನದ ವೀಕ್ಷಿಸಿ ಈಗಾಗಲೇ ಮಳೆಯಿಂದಾಗಿ ಹಾನಿಗೊಳಗಾದ ಕೆಲ ಭಾಗಗಳನ್ನು ಗುತ್ತಿಗೆ ಪಡೆದ ಗುತ್ತಿಗೆದಾರರಿಂದಲೇ ಸರಿಪಡಿಸಲು ಒತ್ತಾಯ ಮಾಡುವುದಾಗಿ ತಿಳಿಸಿದರು.

ನಂತರ ಕ್ರೀಡಾ ಶಾಲೆಯ ಒಳಾಂಗಣವನ್ನು ವೀಕ್ಷಣೆ ಮಾಡಿದ ಅವರು, ಅಲ್ಲಿನ ಸಮಸ್ಯೆಗಳನ್ನು ಸರಿಪಡಿಸಲು ಸಮಗ್ರವಾದ ಮಾಹಿತಿಯನ್ನು ನೀಡುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಸುದ್ಧಿಗಾರರೊಂದಿಗೆ ಮಾತಾನಾಡಿದ ಪುರುಷೋತ್ತಮ್ ಅವರು, ರಾಜ್ಯದಲ್ಲೇ ಪ್ರಥಮವಾಗಿ ಪ್ರಾರಂಭವಾದ ಸರಕಾರಿ ಕ್ರೀಡಾ ಪ್ರೌಢಶಾಲೆ ಇದಾಗಿದ್ದು ಇದರ ಅಭಿವೃದ್ಧಿಗೆ ಎಲ್ಲಾ ಪ್ರಯತ್ನಗಳನ್ನು ಮಾಡುವುದಾಗಿ ತಿಳಿಸಿದರು. ಅಲ್ಲದೆ ಜಿಲ್ಲೆಯಲ್ಲೇ ಉತ್ತಮವಾದ ವಾತಾವರಣ ಹೊಂದಿರುವ ಈ ಕ್ರೀಡಾ ಶಾಲಾ ಆವರಣ ಕ್ರೀಡಾ ವಿದ್ಯಾರ್ಥಿಗಳ ಭವಿಷ್ಯದ ದಾರಿಗೆ ಅನುಕೂಲವಾಗಲಿದೆ. ಈಗಾಗಲೇ ಹಾಕಿ ಟರ್ಫ್ ಮೈದಾನ ನಿರ್ಮಾಣವಾಗುತ್ತಿರುವುದರಿಂದ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಡುವ ವಿದ್ಯಾರ್ಥಿಗಳಿಗೆ ಉತ್ತಮ ರೀತಿಯಲ್ಲಿ ಅಭ್ಯಸಿಸಲು ಸಹಕಾರಿಯಾಗಲಿದೆ ಎಂದರು.

ಕ್ರೀಡಾ ವಸತಿಗೃಹಗಳು ಉತ್ತಮವಾಗಿರುವ ಮತ್ತು ಶುಚಿತ್ವ ಕಾಪಾಡಿಕೊಂಡಿರುವ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ಶಿವಮೊಗ್ಗ ಜಿಲ್ಲೆಯ ದೈಹಿಕ ನಿರ್ದೇಶಕ ಸದಾನಂದ, ಕ್ರೀಡಾ ಶಾಲೆಯ ಮುಖ್ಯ ಶಿಕ್ಷಕಿ ಕುಂತಿಕುಮಾರಿ, ಸಹಾಯಕ ಶಿಕ್ಷಕ ದೇವಕುಮಾರ್, ಅಥ್ಲೆಟಿಕ್ ತರಬೇತುದಾರ ಅಂತೋಣಿ ಡಿಸೋಜ, ಹಾಕಿ ತರಬೇತುದಾರ ವೆಂಕಟೇಶ, ಎ ಮಂಜು, ಶಿಕ್ಷಕರಾದ ಮುರಳಿ, ಅಶ್ವಿನಿ, ಸವಿತಾ, ದಯಾನಂದ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss