ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, ಲಕ್ಷ್ಮಣ ಸವದಿ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
ಈ ವೇಳೆ ವಿವಿಧ ಪ್ರಕೋಷ್ಠಗಳಿಗೆ ಸಂಚಾಲಕರು ಮತ್ತು ವಿವಿಧ ಜಿಲ್ಲೆಗಳಿಗೆ ಪ್ರಭಾರಿಗಳನ್ನು ನೇಮಕ ಮಾಡಲಾಗಿದೆ.
ಲಕ್ಷ್ಮಣ ಸವದಿ ಜೊತೆಗೆ ಉಡುಪಿಯ ನಯನಾ ಗಣೇಶ್ ಅವರಿಗೂ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.
ಇನ್ನು ರಾಜ್ಯ ಮುಖ್ಯ ವಕ್ತಾರರಾಗಿದ್ದ ಕ್ಯಾ.ಗಣೇಶ್ ಕಾರ್ಣಿಕ್ ಅವರಿಗೆ ಅನಿವಾಸಿ ಭಾರತೀಯ ವಿಭಾಗದ ರಾಜ್ಯ ಸಂಚಾಲಕರ ಹುದ್ದೆ ನೀಡಲಾಗಿದೆ.
ಮೈಸೂರಿನ ಎಂ.ಜಿ ಗಣೇಶ್ ರಾಜ್ಯ ಮುಖ್ಯ ವಕ್ತಾರ, ಕೋಷ್ಠಗಳ ರಾಜ್ಯ ಸಹ ಸಂಯೋಜಕರಾಗಿ ಜಯತೀರ್ಥ ಕಟ್ಟಿ, ಕಾನೂನು ಪ್ರಕೋಷ್ಠ ರಾಜ್ಯ ಸಂಚಾಲಕರಾಗಿ ಹೆಚ್ ಯೋಗೇಂದ್ರ, ಸಹ ಸಂಚಾಲಕರಾಗಿ ವಿನೋದ್ ಪಾಟೀಲ್, ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಗೋವಿಂದ ಬಾಂಡೇಕರ್, ಸಹ ಸಂಚಾಲಕರಾಗಿ ನಾಗಪ್ಪ ಅಂಬಿ, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಬಸವರಾಜ ಮತ್ತಿಮೋಡ ಅವರನ್ನು ನೇಮಿಸಲಾಗಿದೆ.
ಮಂಡ್ಯ ಜಿಲ್ಲಾ ಪ್ರಭಾರಿಯಾಗಿ ಜಗದೀಶ್ ಹಿರೇಮನಿ, ಯಾದಗಿರಿ ಜಿಲ್ಲಾ ಪ್ರಭಾರಿಯಾಗಿ ಅಮರನಾಥ ಪಾಟೀಲ್, ದಾವಣಗೆರೆ ಜಿಲ್ಲಾ ಪ್ರಭಾರಿಯಾಗಿ ಶಿವಲಿಂಗಪ್ಪ, ಚಿತ್ರದುರ್ಗ ಜಿಲ್ಲಾ ಪ್ರಭಾರಿಯಾಗಿ ಪ್ರೇಮಕುಮಾರ್, ಬೆಂಗಳೂರು ಉತ್ತರ ಜಿಲ್ಲಾ ಪ್ರಭಾರಿಯಾಗಿ ಕೆವಿ ಶಿವಪ್ಪ, ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಮುರಹರಗೌಡ, ವಿಜಯನಗರ ಜಿಲ್ಲಾ ಅಧ್ಯಕ್ಷರಾಗಿ ಚನ್ನಬಸವನಗೌಡ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.
ಪಕ್ಷದ ವಿವಿಧ ಜವಾಬ್ದಾರಿಗಳಿಗೆ ನೇಮಕಗೊಂಡವರ ಪಟ್ಟಿ. pic.twitter.com/cWh1QEjNaT
— BJP Karnataka (@BJP4Karnataka) December 26, 2021