Thursday, February 25, 2021

Latest Posts

ರಾಜ್ಯ ಬಿಜೆಪಿ ಘಟಕದ ನೂತನ ಪದಾಧಿಕಾರಿಗಳ ಪಟ್ಟಿ ರಿಲೀಸ್ : ಅಚ್ಚರಿ ಹೆಸರುಗಳ ಸೇರ್ಪಡೆ!

ಬೆಂಗಳೂರು: ರಾಜ್ಯ ಸರ್ಕಾರ ಬಿಜೆಪಿ ಘಟಕದ ನೂತನ ಪದಾಧಿಕಾರಿ ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ನೇಮಕ ಮಾಡಿದೆ.
ರಾಜ್ಯ ಉಪಾಧ್ಯಕ್ಷರಾಗಿ ಅರವಿಂದ ಲಿಂಬಾವಳಿ, ನಿರ್ಮಲ್ ಕುಮರ್ ಸುರಾನಾ, ಶೋಭಾ ಕರಂದ್ಲಾಜೆ, , ಎಂ.ಬಿ. ನಂದೀಶ್, ಬಿ.ವೈ. ವಿಜಯೇಂದ್ರ, ಎಂ. ಶಂಕರಪ್ಪ , ಎಂ. ರಾಜೇಂದ್ರ , ಮಾಲೀಕಯ್ಯ ಗುತ್ತೇದಾರ್ , ತೇಜಸ್ವಿನಿ ಅನಂತಕುಮಾರ್ , ಪ್ರತಾಪ ಸಿಂಹ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಎನ್. ರವಿಕುಮಾರ್, ಸಿದ್ದರಾಜು, ಅಶ್ವಥ್ ನಾರಾಯಣ, ಮಹೇಶ್ ತೆಂಗಿನಕಾಯಿ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಕಾರ್ಯದರ್ಶಿಗಳಾಗಿ ಸತೀಶ್ ರೆಡ್ಡಿ, ತುಳಸಿ ಮುನಿರಾಜು ಗೌಡ, ಎಸ್. ಕೇಶವಪ್ರಸಾದ್, ಜಗದೀಶ್ ಹಿರೇಮನಿ, ಸುಧಾ ಜಯರುದ್ರೇಶ್, ಭಾರತಿ ಮಗ್ದುಮ್, ಹೇಮಾವತಿ ನಾಯಕ್, ಉಜ್ವಲಾ ಬಡವಣ್ಣಾಜೆ, ಕೆ.ಎಸ್. ನವೀನ್, ವಿನಯ್ ಬಿದರೆ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಖಜಾಂಚಿಗಳಾಗಿ ಸುಬ್ಬ ನರಸಿಂಹ, ಲೆಹರ್ ಸಿಂಗ್ ಸಿರೋಯಾ ಅವರನ್ನು ನೇಮಕ ಮಾಡಲಾಗಿದೆ.
ಯುವ ಮೋರ್ಚಾ ಅಧ್ಯಕ್ಷರಾಗಿ ಡಾ. ಸಂದೀಪ್, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಗೀತಾ ವಿವೇಕಾನಂದ, ರೈತ ಮೋರ್ಚಾ ಅಧ್ಯಕ್ಷರಾಗಿ ಈರಣ್ಣ ಕಡಾಡಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಅಶೋಕ ಗಸ್ತಿ, ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಚಲವಾದಿ ನಾರಾಯಣಸ್ವಾಮಿ, ಎಸ್ಟಿ ಮೋರ್ಚಾ ಅಧ್ಯಕ್ಷರಾಗಿ ತಿಪ್ಪರಾಜು ಹವಾಲ್ದಾರ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಮುಜಮಿಲ್ ಬಾಬು ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೋಕೇಶ್ ಅಂಬೇಕಲ್ಲು, ರಾಜ್ಯ ವಕ್ತಾರರಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರನ್ನು ನೇಮಕ ಮಾಡಲಾಗಿದೆ. ಪ್ರಕೋಷ್ಟಗಳ ಸಂಯೋಜಕರಾಗಿ ಎಂ.ಬಿ. ಭಾನುಪ್ರಕಾಶ್, ಡಾ.ಎ.ಹೆಚ್. ಶಿವಯೋಗಿಸ್ವಾಮಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇಮಕ ಮಾಡಿದ್ದಾರೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!