Saturday, June 25, 2022

Latest Posts

ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷರ ಪತ್ನಿಗೆ ಕೊರೋನಾ

ಹಾಸನ: ಜಿಲ್ಲೆಯ ಜನ ಪ್ರತಿನಿಧಿಗಳ ಕುಟುಂಬ ಸದಸ್ಯರಿಗೆ ಕೊರೋನಾ ಬಿಟ್ಟು ಬಿಡದಂತೆ ಕಾಡ ತೊಡಗಿದ್ದು,ಮತ್ತೊವ೯ ಜನಪ್ರತಿನಿಧಿಯ ಕುಟುಂಬ ಸದಸ್ಯರಿಗೆ ಕೊರೋನಾ ವಕ್ಕರಿಸಿದೆ.
ರಾಜ್ಯ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ದಿವಂಗತ ಬಿ.ಬಿ ಶಿವಪ್ಪ ಅವರ ಪತ್ನಿ ಸುಶೀಲಮ್ಮ ಶಿವಪ್ಪರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಸಕಲೇಶಪುರದ ಕುಂಬ್ರಹಳ್ಳಿಯ ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡಿದ್ದ ಅವರಿಗೆ ಶಸ್ತ್ರ ಚಿಕಿತ್ಸೆ ಅಗತ್ಯತೆಯ ಹಿನ್ನಲೆಯಲ್ಲಿ ಇತ್ತೀಚೆಗೆ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಲಿಸಲಾಗಿತ್ತು.
ಶಸ್ತ್ರ ಚಿಕಿತ್ಸೆಗೂ ಮೊದಲು ಅವರ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಕೊರೋನಾ ನೆಗೆಟಿವ್ ಬಂದಿತ್ತು.ನಂತರದ ಸಮಯದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದ್ದು,ಸೋಂಕು ದೃಢಪಟ್ಟಿದೆ.
ಸುಶೀಲಮ್ಮ ಶಿವಪ್ಪ ಬಿಜೆಪಿ ರಾಜ್ಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆಯಾಗಿ ಕಾಯ೯ ನಿವ೯ಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss