Friday, July 1, 2022

Latest Posts

ರಾಜ್ಯ ಮಹಿಳಾ ವಿವಿ ಕುಲಪತಿಯಾಗಿ ಪ್ರೊ. ತುಳಸಿಮಾಲಾ ನೇಮಕ

ಹೊಸ ದಿಗಂತ ವರದಿ, ವಿಜಯಪುರ:

ಇಲ್ಲಿನ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊ.ಬಿ.ಕೆ. ತುಳಸಿಮಾಲಾ ಅವರನ್ನು ನೇಮಕ ಮಾಡಲಾಗಿದೆ.
ಮೈಸೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ.ತುಳಸಿಮಾಲಾ ಅವರು, ಪ್ರಸ್ತುತ ಬಳ್ಳಾರಿಯ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರೊ.ತುಳಸಿಮಾಲಾ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ನಾಲ್ಕು ವರ್ಷಗಳ ವರೆಗೆ ಅಧಿಕಾರಾವಧಿ ಇರುತ್ತದೆ ಎಂದು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss