ಹೊಸ ದಿಗಂತ ಆನ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡದ ಸಂಭವಿಸಿದ್ದು, ಲಕ್ಕಸಂದ್ರದಲ್ಲಿರುವ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಆತಂಕ ಸೃಷ್ಟಿಸಿದೆ.
ಈಗಾಗಲೇ ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಇಡೀ ಗೊಡೌನ್ಗೆ ಬೆಂಕಿಯ ಜ್ವಾಲೆ ವ್ಯಾಪಿಸಿದ್ದು, ಹೊತ್ತಿ ಉರಿತ್ತಿದೆ. ಇದು ಸ್ಥಳೀಯರಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿದೆ.
ಬಾಪೂಜಿನಗರ ಹೊಸಗುಡ್ಡದಹಳ್ಳಿಯಲ್ಲಿ ನವೆಂಬರ್ ತಿಂಗಳಲ್ಲಿ ಭಾರಿ ಬೆಂಕಿ ದುರಂತ ಸಂಭವಿಸಿತ್ತು. ವೇಳೆ ಸಾಕಷ್ಟು ಮನೆಗಳು ಬೆಂಕಿಗೆ ಆಹುತಿ ಆಗಿದ್ದವು.