Tuesday, August 16, 2022

Latest Posts

ರಾಜ್ಯ ಸಭೆಯಲ್ಲಿ ನೂತನ ಕೃಷಿ ಮಸೂಧೆ ಮಂಡಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸಕಾರವು ರಾಜ್ಯ ಸಭೆಯಲ್ಲಿ ಎರಡು ಕೃಷಿ ಮಸೂಧೆಯನ್ನು ಮಂಡಿಸಿದೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಮಂಡನೆಯನ್ನು ಮಾಡಿದ್ದಾರೆ.

ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ ಮಸೂದೆ 2020 ಮತ್ತು ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಮಸೂದೆಯನ್ನು ಕೇಂದ್ರ ಸಚಿವರು ಮಂಡನೆ ಮಾಡಿದ್ದಾರೆ.

ವೇಳೆ ಮಾತನಾಡಿದ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಎರಡು ಮಸೂದೆಗಳು ರೈತರ ಜೀವನದಲ್ಲಿ ಬದಲಾವಣೆ ತರಲಿದ್ದು, ರೈತರು ದೇಶದಲ್ಲಿ ಎಲ್ಲಿ ಬೇಕಾದರೂ ತಮ್ಮ ಬೆಳೆಗಳನ್ನು ಮುಕ್ತವಾಗಿ ವ್ಯಾಪಾರ ಮಾಡಲು ಮಸೂದೆಗಳು ಅನುವು ಮಾಡಿಕೊಡಲಿದೆ. ಮಧ್ಯವರ್ತಿಗಳು ಹಾಗೂ ವಿವಿಧ ಸಮಸ್ಯೆಗಳಿಂದ ರೈತರು ಹಾಗೂ ಕೃಷಿ ಕ್ಷೇತ್ರಕ್ಕೆ ಮುಕ್ತಿ ನೀಡಲಿವೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss