Thursday, July 7, 2022

Latest Posts

ರಾಜ್ಯ ಸರ್ಕಾರದಿಂದ ಆರೋಗ್ಯಾಭಿವೃದ್ಧಿ ಯೋಜನೆ: ಬಜೆಟ್

ಬೆಂಗಳೂರು: 2020 ನೇ ಸಾಲಿನ ಬಜೆಟ್ ನಲ್ಲಿ ರಾಜ್ಯ ಸರ್ಕಾರ ರಾಜ್ಯದ ಆರೋಗ್ಯ ಕೇಂದ್ರಗಳ ಅಭಿವೃದ್ಧಿ ಯೋಜನೆಗಳನ್ನು ಘೋಷಿಸಿದರು

  • ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ / ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಂತ ಹಂತವಾಗಿ 19 ಕೋಟಿ ರೂ. ವೆಚ್ಚದಲ್ಲಿ ಟೆಲಿಮೆಡಿಸನ್ ಸೇವೆ ವಿಸ್ತರಣೆ.
  • ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ 200 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.
  • ಆರು ವರ್ಷದೊಳಗಿನ ಮಕ್ಕಳಲ್ಲಿ ಜನ್ಮಜಾತ ಕಿವುಡುತನ ಪತ್ತೆ ಹಚ್ಚಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ನಡೆಸಿ, ಶ್ರವಣಯಂತ್ರ ಒದಗಿಸಿ ಗುಣಪಡಿಸುವ ಯೋಜನೆಗೆ 28 ಕೋಟಿ ರೂ. ಅನುದಾನ.
  • ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಲ್ಲಿ ತಾಲ್ಲೂಕು ಆಸ್ಪತ್ರೆಗಳ ತೀವ್ರ ನಿಗಾ ಘಟಕ ನಿರ್ವಹಣೆ.
  • ರಾಜ್ಯದ ಆಯ್ದ ಐದು ಜಿಲ್ಲೆಗಳಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಬಡ ರೋಗಿಗಳಿಗೆ ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ.
  • ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇತರೆ ಐದು ಆಸ್ಪತ್ರೆಗಳ ತುರ್ತು ವೈದ್ಯಕೀಯ ಚಿಕಿತ್ಸಾ ವಿಭಾಗಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಿ ಉತ್ಕೃಷ್ಟತಾ ಕೇಂದ್ರಗಳನ್ನಾಗಿ (Centre of Excellence) ಅಭಿವೃದ್ಧಿಪಡಿಸಲು ಐದು ಕೋಟಿ ರೂ. ಅನುದಾನ.
  • ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಸಿ.ವಿ. ರಾಮನ್ ಆಸ್ಪತ್ರೆಗಳಲ್ಲಿ ಹೃದಯ ರೋಗದ ಚಿಕಿತ್ಸೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಕ್ಯಾತ್‍ಲ್ಯಾಬ್ ಸ್ಥಾಪನೆ.
  • ಹಾವೇರಿ ಜಿಲ್ಲೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 20 ಹಾಸಿಗೆಗಳ ಆಯುಷ್ ಸಂಯುಕ್ತ ಆಸ್ಪತ್ರೆ ಪ್ರಾರಂಭ. ಐದು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.
  • ರಾಜ್ಯದ 17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳ (Neonatal Intensive Care Unit) ಹಂತ ಹಂತವಾಗಿ ಉನ್ನತೀಕರಣ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳೂರಿನ ವಿಭಾಗೀಯ ಆಧುನಿಕ ಮಕ್ಕಳ ಆರೋಗ್ಯ ಕೇಂದ್ರದ ಮಾದರಿಯ ಕೇಂದ್ರಗಳ ಸ್ಥಾಪನೆ.
  • ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ಮೂರು ಕೋಟಿ ರೂ. ವೆಚ್ಚದಲ್ಲಿ ಸಿಮ್ಯುಲೇಷನ್ ಲ್ಯಾಬ್ ಮತ್ತು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಮಾಲಿಕ್ಯುಲಾರ್ ಬಯಾಲಜಿ ಲ್ಯಾಬ್ ಸ್ಥಾಪನೆ.
  • ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆರ್ಥಿಕ ನೆರವಿನೊಂದಿಗೆ ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ಶಾಸ್ತ್ರದ ಸಂಸ್ಥೆ ಮತ್ತು ಜಿರಿಯಾಟ್ರಿಕ್ಸ್ ಸಂಸ್ಥೆಗಳ ಸ್ಥಾಪನೆ.
  • ವೈದ್ಯಕೀಯ, ಶುಶ್ರೂಷಾ, ಅರೆ-ವೈದ್ಯಕೀಯ ಮತ್ತು ಫಾರ್ಮಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಂದು ಕೇಂದ್ರೀಕೃತ ಉದ್ಯೋಗ ಕೋಶ ಸ್ಥಾಪನೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss