ಬೆಂಗಳೂರು : ಗಣೇಶ ವಿಸರ್ಜನೆ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಮತ್ತು ಹಂಸಬಾವಿ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆಯಲಾಗಿದೆ.
ಗಣೇಶೋತ್ಸವ ವೇಳೆ ಮೂರ್ತಿ ವಿಸರ್ಜನೆಗೆ ಸಂಬಂಧಪಟ್ಟಂತೆ 2019 ರಲ್ಲಿ ಹಂಸಬಾವಿಯಲ್ಲಿ 11 ಮಂದಿ ಹಾಗೂ 2011 ರಲ್ಲಿ ರಟ್ಟಿಹಳ್ಳಿಯಲ್ಲಿ 46 ಜನರ ಮೇಲೆ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ನಡೆದ ಸಂಘರ್ಷಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.
ಈಗ ಎರಡು ಠಾಣೆಗಳಲ್ಲಿರುವ ಸಾರ್ವಜನಿಕರ ಮೇಲಿನ ಪ್ರಕರಣವನ್ನು ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆಯಲಾಗಿದೆ .
ಪ್ರಕರಣ ಹಿಂಪಡೆದದ್ದಕ್ಕೆ ಕ್ಷೇತ್ರದ ಜನತೆ ಹಾಗೂ ಬಿಜೆಪಿ ಘಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್ ಅವರುಗಳಿ ಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.