Tuesday, June 28, 2022

Latest Posts

ರಾಜ್ಯ ಸರ್ಕಾರದಿಂದ ಪೊಲೀಸರಿಗೆ ಸಿಹಿ ಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಜೊತೆಗೆ ಪೊಲೀಸರಿಗೂ ಕೊರೊನಾ ಸೋಂಕು ತಗುಲುವುದು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಕೊರೊನಾ ಸೋಂಕು ತಗುಲುವುದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ತಜ್ಞರ ಸಲಹೆಯ ಮೇರೆಗೆ ಕೆಲ ಕ್ರಮಗಳನ್ನು ಕೈಗೊಳ್ಳಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಮ್ಮ ಪೊಲೀಸರು ಕೋವಿಡ್-19 ಕೆಲಸದ ಜೊತೆಗೆ ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ನಿಯಂತ್ರಣವನ್ನು ಅಷ್ಟೇ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೊರೋನಾ ಸೋಂಕು ಪೊಲೀಸರಿಗೂ ತಗುಲುತ್ತಿರುವುದು ಹೆಚ್ಚಾಗಿರುವ ಹಿನ್ನಲೆಯಲ್ಲಿ, ಪರಿಣಿತರು, ಸಾರ್ವಜನಿಕರು ಹಾಗೂ ಮಾಧ್ಯಮ ಸ್ನೇಹಿತರು ಈ ಕೆಳಕಂಡ ಸಲಹೆ ನೀಡಿರುತ್ತಾರೆ. ಹೀಗಾಗಿ ಈ ಕೆಳಕಂಡ ಅಂಶಗಳನ್ನು ಹಿರಿಯ ಅಧಿಕಾರಿಗಳು ಕಟ್ಟು ನಿಟ್ಟಾಗಿ ಪಾಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

  • ಕೂಡಲೇ ಆರೋಗ್ಯ ಭಾಗ್ಯದಡಿಯಲ್ಲಿ ಹಣವನ್ನು ಎಲ್ಲಾ ನಿಯೋಜಿತ ಆಸ್ಪತ್ರೆಗಳಿಗೆ ಬಿಡುಗಡೆ ಮಾಡಿ ಎಲ್ಲಾ ಆಸ್ಪತ್ರೆಗಳಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಪ್ರತ್ಯೇಕ ಚಿಕಿತ್ಸೆ ವ್ಯವಸ್ಥೆ ಮಾಡುವುದು
  • ಪ್ರತಿಯೊಬ್ಬ ಪೊಲೀಸ್ ಕಾನ್ಸ್ ಟೇಬಲ್ ಗಳಿಗೆ ಶಿಫ್ಟ್ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುವಂತೆ ಸೂಚಿಸುವುದು
  • ಪೊಲೀಸ್ ಠಾಣೆಗಳಲ್ಲಿ ಕೋವಿಡ್-19 ಹರಡುವ ಸ್ಥಳವಾಗಿರುವುದರಿಂದ ಅವಶ್ಯಕತೆಯಿರುವ ಸಿಬ್ಬಂದಿಗಳು ಮಾತ್ರ ನಿಯೋಜಿಸುವುದು
  • ಸಾರ್ವಜನಿಕರ ದೂರುಗಳನ್ನು ಆನ್ ಲೈನ್ ಗಳ ಮೂಲಕ ಸ್ವೀಕರಿಸಿ, ದಾಖಲಾದ ದೂರುಗಳನ್ನು ವಿಚಾರಣೆ ಮಾಡುವುದು.
  • 50 ವರ್ಷ ಮೇಲ್ಪಟ್ಟ ಸಿಬ್ಬಂದಿಗಳಿಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸುವುದು
  • ಕರ್ತವ್ಯ ಮುಗಿದ ನಂತ್ರ ಸಿಬ್ಬಂದಿ ಹಾಗೂ ಠಾಣೆಗಳನ್ನು ಸ್ವಚ್ಛಗೊಳಿಸುವ ವ್ಯವಸ್ಥೆ ಮಾಡುವುದು. ಅದಕ್ಕಾಗಿ ಬೇಕಾಗುವ ಹಣಕಾಸಿನ ನೆರವು ನೀಡುವುದು.
  • ಪೊಲೀಸ್ ಠಾಣೆಗಳಲ್ಲಿ ಸ್ವಾಗತಗಾರರ ಸ್ಥಳಗಳಲ್ಲಿ ಗಾಜಿನ ಕ್ಯಾಬಿನೆಟ್ ಗಳನ್ನು ಅಳವಡಿಸಿ, ದೂರುಗಳನ್ನು ಸ್ವೀಕರಿಸುವುದು.
  • ಕೋವಿಡ್-19 ಆಸ್ಪತ್ರೆ ಹಾಗೂ ಸ್ಮಶಾನ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್, ಹೆಡ್ ಗ್ಲೇರ್, ಗ್ಲೌಸ್ ಹಾಗೂ ಪಿಪಿಇ ಕಿಟ್ ಗಳನ್ನು ನೀಡುವುದು.
  • ಪೊಲೀಸ್ ಸಿಬ್ಬಂದಿಯ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಲು ಆಯುಷ್, ಆಯುರ್ವೇದಿಕ್ ಔಷಧಿಗಳ್ನು ನೀಡುವುದು

ಈ ಎಲ್ಲಾ ಮೇಲ್ಕಂಡ ಅಂಶಗಳನ್ನು ಹಿರಿಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಸಿಲಿಸುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss