Saturday, August 13, 2022

Latest Posts

ರಾಜ್ಯ ಸರ್ಕಾರದಿಂದ ಮೋಟಾರು ವಾಹನ ತೆರಿಗೆ ಇಳಿಕೆ: ಎಲ್ಲಾ ವಾಹನಗಳಿಗೆ ಇಲ್ಲ ಈ ಭಾಗ್ಯ…

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿನ 13 ರಿಂದ 20 ಆಸನ ಸಾಮರ್ಥ್ಯವುಳ್ಳ ಒಪ್ಪಂದದ ವಾಹನಗಳಿಗೆ, ಪ್ರತಿ ಆಸನಕ್ಕೆ ನಿಗಧಿ ಪಡಿಸಲಾಗಿದ್ದಂತ ರೂ.900 ಮೋಟಾರು ವಾಹನ ತೆರಿಗೆಯನ್ನು ಇಳಿಕೆ ಮಾಡಿದೆ ಈ ಮೂಲಕ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಅಧಿನಿಯಮ 1957 ( ಕರ್ನಾಟಕ ಕಾಯ್ದೆ 35/1957) ಕಲಂ 16(1) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಮೋಟಾರು ವಾಹನಗಳ ಅಧಿನಿಯಮ 1957ರ ಷೆಡ್ಯೂಲ್ (ಎ) ಐಟಂ ಸಂಖ್ಯೆ: 5(ಎ)(iii) ರಂತೆ ರಾಜ್ಯದಲ್ಲಿನ 13 ರಿಂದ 20 ಆಸನ ಸಾಮರ್ಥ್ಯವುಳ್ಳ ಒಪ್ಪಂದ ವಾಹನಗಳಿಗೆ ಪ್ರತಿ ಆಸನಕ್ಕೆ ನಿಗದಿಪಡಿಸಿರುವ ರೂ. 900/- ಗಳ ಮೋಟಾರು ವಾಹನ ತೆರಿಗೆಯನ್ನು ರೂ. 700/- ಗಳಿಗೆ ಇಳಿಸಲಾಗಿದೆ ಎಂದು ತಿಳಿಸಿದ್ದಾರೆ.ಮೋಟಾರು ವಾಹನಗಳ ತೆರಿಗೆಯನ್ನು ಇಳಿಸಬೇಕೆಂದು ಹಲವಾರು ವಾಹನ ಮಾಲೀಕರು, ವಿವಿಧ ಸಂಘಟನೆಗಳು ಸಲ್ಲಿಸಿದ್ದ ಬೇಡಿಕೆಗೆ ಸ್ಪಂದಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸವದಿ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss