Monday, August 8, 2022

Latest Posts

ರಾಜ್ಯ ಸರ್ಕಾರದ ಕೋವಿಡ್ ನಿಯಮ ಉಲ್ಲಂಘನೆ: ಬೆಂಗಳೂರಿನ ಸಾಕ್ರಾ ಖಾಸಗಿ ಆಸ್ಪತ್ರೆಯ ವಿರುದ್ಧ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ ಪ್ರತಿಯೊಂದು ಖಾಸಗಿ ಆಸ್ಪತ್ರೆಯಲ್ಲಿಯೂ ಕೋವಿಡ್ ರೋಗಿಗಳಿಗಾಗಿ ಶೇ. 50 ಬೆಡ್‌ಗಳನ್ನು ಮೀಸಲಿಡಬೇಕು ಎಂದು ಸೂಚಿಸಿದೆ. ಆದರೂ ಈ ನಿಯಮ ಕೆಲವು ಆಸ್ಪತ್ರೆಗಳಿಂದ ಉಲ್ಲಂಘನೆ ಆಗುತ್ತಲೇ ಇದೆ.

ಬೆಂಗಳೂರಿನ ಮಾರತ್ ಹಳ್ಳಯ ಸಾಕ್ರಾ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆಂದು ಶೇ. ೫೦ರಷ್ಟು ಬೆಡ್‌ಗಳನ್ನು ಮೀಸಲಿಟ್ಟಿರಲಿಲ್ಲ. ಈ ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದು, ಸಾಕ್ರಾ ಆಸ್ಪತ್ರೆಯ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಈ ಮೂಲಕ ರಾಜ್ಯ ಸರ್ಕಾರದ ನೀತಿ ಉಲ್ಲಂಘಿಸುವ ಖಾಸಗಿ ಆಸ್ಪತ್ರೆಗಳಿಗೆ ಸುಧಾಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss