ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲು ತೀರ್ಮಾನಿಸಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ಕೈಗೊಳ್ಳುತ್ತಿರುವ ತೀರ್ಮಾನಗಳನ್ನು ವಿರೋಧಿಸಿದ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ತೀರ್ಮಾನಿಸಿರುವುದಾಗಿ ಸ್ಪೀಕರ್ ಕಾಗೇರಿ ಅವರಿಗೆ ನೋಟೀಸ್ ನೀಡಿದ್ದಾರೆ.
ಇಂದು ಶಾಸಕಾಂಗ ಪಕ್ಷದ ಸಭೆ ಬಳಿಕ ಮಾತನಾಡಿದ ಅವರು, ಭೂ ಸುಧಾರಣೆ, ಅನುದಾನ, ಅಭಿವೃದ್ಧಿ ಗಳಲ್ಲಿ ಭಾರಿ ಭ್ರಷ್ಟಾಚಾರವಾಗುತ್ತಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿ ಅಧೋಗತಿಯಾಗಿದೆ ಎಂದು ಆರೋಪಿಸಿದ್ದಾರೆ.