Monday, August 8, 2022

Latest Posts

ರಾಧಿಕಾ ಯಾರೆಂದು ನನಗೆ ಗೊತ್ತಿಲ್ಲ: ಸಂಬಂಧಪಡದ ವಿಚಾರ ಕೇಳಬೇಡಿ ಎಂದ ಹೆಚ್.ಡಿ ಕುಮಾರಸ್ವಾಮಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಧಿಕಾ ಯಾರೆಂದು ನನಗೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನೇರಳಕೆರೆಯಲ್ಲಿ ಸಿಸಿಬಿಯಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ ಕುರಿತಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಯಾರಪ್ಪ ಅವರೆಲ್ಲ. ಅದ್ಯಾರು ನನಗೆ ಗೊತ್ತಿಲ್ಲವೆಂದು ಹೇಳಿದ್ದು, ನನಗೆ ಸಂಬಂಧಪಡದ ವಿಚಾರವನ್ನು ಕೇಳಬೇಡಿ ಎಂದು ತಿಳಿಸಿದ್ದಾರೆ.
ವಂಚಕ ಯುವರಾಜ್ ಜೊತೆಗೆ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ರಾಧಿಕಾ ಕುಮಾರಸ್ವಾಮಿ ಅವರ ವಿಚಾರಣೆ ನಡೆಸಿದ್ದಾರೆ. ಈ ವಿಚಾರವಾಗಿ ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಹೆಚ್.ಡಿ.ಕೆ., ಸಂಬಂಧಪಡದ ವಿಚಾರವನ್ನು ಕೇಳಬೇಡಿ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss