Saturday, January 23, 2021

Latest Posts

ರಾಮನಗರ: ಗೋಹತ್ಯೆ-ಅಕ್ರಮ ಗೋಸಾಗಾಣಿಕೆ ನಿಷೇಧಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಹೊಸದಿಗಂತ ವರದಿ, ರಾಮನಗರ

ರಾಜ್ಯದಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವುದು, ಜಿಲ್ಲಾದ್ಯಂತ ನಡೆಯುತ್ತಿರುವ ಅಕ್ರಮ ಗೋ ಕಳ್ಳ ಸಾಗಾಣಿಕೆ ಹಾಗೂ ಗೋ ಖಸಾಯಿಖಾನೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗೋಹತ್ಯಾ ವಿರೋಧಿ ಹೋರಾಟ ಸಮಿತಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಬಿಜೆಪಿ ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತರು, ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಅಕ್ರಮ ಗೋ ಕಳ್ಳ ಸಾಗಾಣಿಕೆ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯುತ್ತಿದೆ. ಕಿಕ್ಕೇರಿ ರಸ್ತೆ ಮೂಲಕ ಹಾಸನದಿಂದ ಕೇರಳಕ್ಕೆ, ತುಮಕೂರು-ಪಾಂಡವಪುರ ಮಾರ್ಗವಾಗಿ ಕೇರಳಕ್ಕೆ, ಕುಣಿಗಲ್, ಮದ್ದೂರು, ಮಳವಳ್ಳಿ ಮಾರ್ಗವಾಗಿ ಗೋಸಾಗಾಣಿಗೆ ನಿತ್ಯ ನಡೆಯುತ್ತಿದ್ದು, ಈ ಬಗ್ಗೆ ಪೆÇಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದರು

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!