Wednesday, July 6, 2022

Latest Posts

ರಾಮನಗರ: ಜಿಲ್ಲಾ ಬಿಜೆಪಿಯಿಂದ ರಕ್ತದಾನ ಶಿಬಿರ

ರಾಮನಗರ: ಕರೋನಾ ಸಂಕಷ್ಟ ಕಾಲದಲ್ಲಿ ಆಸ್ಪತ್ರೆಯಲ್ಲಿ ರಕ್ತದ ಕೊರತೆ ಇರುವುದರಿಂದ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲೆಯ ಎಲ್ಲಾ ಮಂಡಲಗಳಲ್ಲೂ ರಕ್ತದಾನ ಶಿಬಿರ ಆಯೋಜಿಸಲಾಗಿದೆಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲವಾಡಿ ದೇವರಾಜು ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಚನ್ನಪಟ್ಟಣ ಆ- 29 ಕನಕಪುರ ಆ-20, ರಾಮನಗರ ಮತ್ತು ಮಾಗಡಿ ಆ-16 ರಂದು ರಕ್ತದಾನ ಶಿಬಿರ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರದೇವರು ಮಾತನಾಡಿ ಭಾರತೀಯ ಜನತಾ ಪಾರ್ಟಿ ರಾಮನಗರ ವಿಧಾನ ಸಭಾ ಕ್ಷೇತ್ರ, ವಾಸವಿ ವಿದ್ಯಾನಿಕೇತನ ಟ್ರಸ್ಟ್‌ (ರಿ) ರಾಮನಗರ ಹಾಗೂ ಕಿದ್ವಾಯಿ ಸ್ಮಾರಕ ಗಂಥಿ ಬೆಂಗಳೂರು ಇವರ ಸಹಯೋಗದೊಂದಿಗೆ ಆ-16 ಭಾನುವಾರ ಬೆಳಿಗ್ಗೆ 9-00 ರಿಂದ 1-30 ರವರಗೆ ನಗರದ ಕನ್ನಿಕಾ ಮಹಲ್ ನಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಹುತಾತ್ಮ ಯೋಧರ ಸವಿನೆನಪಿಗಾಗಿ ರಕ್ತದಾನ ಶಿಬಿರ ನಡೆಯಲಿದೆ.

ಶಿಬಿರದ ಉದ್ಘಾಟನೆಯನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣಗೌಡ ಮಾಡಲಿದ್ದು, ಚನ್ನಪಟ್ಟಣದ ವಿರಕ್ತ ಮಠದ ಮಠಾಧೀಶರಾದ ಶ್ರೀ ಶಿವರುದ್ರ ಸ್ವಾಮಿಗಳು ವಹಿಸಲಿದ್ದಾರೆ. ಶಿಬಿರದ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಗ್ರಾಮಾಂತರ ವಿಭಾಗದ ಸಂಘಟನಾ ಕಾರ್ಯದರ್ಶಿ ಕಾಂತರಾಜು, ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ಎನ್.ರವಿಕುಮಾರ್, ವಾಸವಿ ವಿದ್ಯಾನಿಕೇತನ ಟ್ರಸ್ಟ್‌ ಅಧ್ಯಕ್ಷ ಸುರೇಂದ್ರನಾಥ ಗುಪ್ತ, ಕಿದ್ವಾಯ್ ಸಂಸ್ಥೆಯ ಡಾ|| ಸತೀಶ್ ಬಾಬು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಯುವಕರು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಈ ವೇಳೆ ಜಿಲ್ಲಾ ಘಟಕದ ಯುವ ಮೋರ್ಚಾ ಅಧ್ಯಕ್ಷ ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್, ತಾಲ್ಲೂಕು ಬಿಜೆಪಿ ಅದ್ಯಕ್ಷ ಗೋಪಾಲ್, ಪ್ರಧಾನ ಕಾರ್ಯದರ್ಶಿಗಳಾದ ಎಂ.ಬಿ. ಜಗದೀಶ್, ವಿ.ಅಂದಾನಿ, ನಗರ ಘಟಕದ ಅಧ್ಯಕ್ಷ ಶಿವಾನಂದ್, ಪ್ರಧಾನ ಕಾರ್ಯದರ್ಶಿ ಡಿ.ನರೇಂದ್ರ, ದರ್ಶನ್, ಮಾಧ್ಯಮ ವಕ್ತಾರ ಚಂದ್ರಶೇಖರ್ ರೆಡ್ಡಿ, ವಕೀಲ ಟಿ.ಕೆ. ಶಾಂತಪ್ಪ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss