Thursday, August 18, 2022

Latest Posts

ರಾಮನಗರ ಜಿಲ್ಲೆಯಲ್ಲಿ ಮಂಗಳವಾರ 67 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ, ಒಂದು ಸಾವು

ರಾಮನಗರ: ಜಿಲ್ಲೆಯಲ್ಲಿ ಚನ್ನಪಟ್ಟಣ 21, ಕನಕಪುರ 17, ಮಾಗಡಿ 11 ಮತ್ತು ರಾಮನಗರ 18 ಪ್ರಕರಣಗಳು ಸೇರಿ ಇಂದು ಒಟ್ಟು 67 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.
ಒಟ್ಟು ಪ್ರಕರಣ: ಇದುವರೆಗೆ ಜಿಲ್ಲೆಯಲ್ಲಿ 5543 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1337, ಕನಕಪುರ 1150, ಮಾಗಡಿ 865 ಮತ್ತು ರಾಮನಗರ 2191 ಪ್ರಕರಣಗಳು ಸೇರಿವೆ.
ಸಾವು : ಮಾಗಡಿ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 12, ಕನಕಪುರ ತಾಲ್ಲೂಕಿನಲ್ಲಿ 12, ಮಾಗಡಿ ತಾಲ್ಲೂಕಿನಲ್ಲಿ 16 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 15 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 55 ಮಂದಿ ನಿಧನರಾಗಿದ್ದಾರೆ.
ಗುಣಮುಖ : ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 32, ಕನಕಪುರ ತಾಲ್ಲೂಕಿನಲ್ಲಿ 17, ಮಾಗಡಿ ತಾಲ್ಲೂಕಿನಲ್ಲಿ 21 ಹಾಗೂ ರಾಮನಗರ ತಾಲ್ಲೂಕಿನಲ್ಲಿ 19 ಜನ ಸೇರಿ ಒಟ್ಟಾರೆ 89 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4656 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 1155, ಕನಕಪುರ 957, ಮಾಗಡಿ 677 ಮತ್ತು ರಾಮನಗರ 1867 ಜನರು ಸೇರಿದ್ದಾರೆ.
ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ದಾಖಲಾಗಿರುವ 5543 ಪ್ರಕರಣಗಳ ಪೈಕಿ 4656 ಜನರು ಗುಣಮುಖರಾಗಿದ್ದಾರೆ, ಇನ್ನೂ 832 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು 832 ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 170, ಕನಕಪುರ 181, ಮಾಗಡಿ 172 ಮತ್ತು ರಾಮನಗರ 309 ಪ್ರಕರಣಗಳು ಸೇರಿವೆ.
ಜಿಲ್ಲಾ ಆರೋಗ್ಯ ಇಲಾಖೆ ವರದಿ: ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಸೋಮವಾರ (ಸೆ. 28) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 46474 (ಹೊಸದಾಗಿ ಇಂದಿನ 850 ಸೇರಿ).

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!