Thursday, June 30, 2022

Latest Posts

ರಾಮನಗರ ಜಿಲ್ಲೆಯಲ್ಲಿ ಮಂದಿಗೆ 146 ಕೊರೋನಾ ಪಾಸಿಟಿವ್, 96 ಜನರು ಗುಣಮುಖ

ರಾಮನಗರ: ಜಿಲ್ಲೆಯಲ್ಲಿ ಚನ್ನಪಟ್ಟಣ 34, ಕನಕಪುರ 17, ಮಾಗಡಿ 32 ಮತ್ತು ರಾಮನಗರ 63 ಪ್ರಕರಣಗಳು ಸೇರಿ ಇಂದು ಒಟ್ಟು 146 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.
ಒಟ್ಟು ಪ್ರಕರಣ: ಇದುವರೆಗೆ ಜಿಲ್ಲೆಯಲ್ಲಿ 4622 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1094, ಕನಕಪುರ 942, ಮಾಗಡಿ 720 ಮತ್ತು ರಾಮನಗರ 1866 ಪ್ರಕರಣಗಳು ಸೇರಿವೆ.
ಸಾವು : ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 12, ಕನಕಪುರ ತಾಲ್ಲೂಕಿನಲ್ಲಿ 11, ಮಾಗಡಿ ತಾಲ್ಲೂಕಿನಲ್ಲಿ 14 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 15 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 52 ಮಂದಿ ನಿಧನರಾಗಿದ್ದಾರೆ.
ಗುಣಮುಖ : ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 16, ಕನಕಪುರ ತಾಲ್ಲೂಕಿನಲ್ಲಿ 19, ಮಾಗಡಿ ತಾಲ್ಲೂಕಿನಲ್ಲಿ 23 ಹಾಗೂ ರಾಮನಗರ ತಾಲ್ಲೂಕಿನಲ್ಲಿ 38 ಜನ ಸೇರಿ ಒಟ್ಟಾರೆ 96 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 3706 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 886, ಕನಕಪುರ 753, ಮಾಗಡಿ 490 ಮತ್ತು ರಾಮನಗರ 1577 ಜನರು ಸೇರಿದ್ದಾರೆ.
ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ದಾಖಲಾಗಿರುವ 4622 ಪ್ರಕರಣಗಳ ಪೈಕಿ 3706 ಜನರು ಗುಣಮುಖರಾಗಿದ್ದಾರೆ, ಇನ್ನೂ 864 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು 864 ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 196, ಕನಕಪುರ 178, ಮಾಗಡಿ 216 ಮತ್ತು ರಾಮನಗರ 274 ಪ್ರಕರಣಗಳು ಸೇರಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss