Wednesday, August 10, 2022

Latest Posts

ರಾಮನಗರ ಜಿಲ್ಲೆಯಲ್ಲಿ 119 ಕೊರೋನಾ ಪ್ರಕರಣ ದೃಢ : 74 ಜನರು ಗುಣಮುಖ

ರಾಮನಗರ: ಜಿಲ್ಲೆಯಲ್ಲಿ ಚನ್ನಪಟ್ಟಣ 20, ಕನಕಪುರ 21, ಮಾಗಡಿ 11 ಮತ್ತು ರಾಮನಗರ 67 ಪ್ರಕರಣಗಳು ಸೇರಿ ಇಂದು ಒಟ್ಟು 119 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ 3359 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 815, ಕನಕಪುರ 709, ಮಾಗಡಿ 474 ಮತ್ತು ರಾಮನಗರ 1361 ಪ್ರಕರಣಗಳು ಸೇರಿವೆ.
ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 7, ಕನಕಪುರ ತಾಲ್ಲೂಕಿನಲ್ಲಿ 9, ಮಾಗಡಿ ತಾಲ್ಲೂಕಿನಲ್ಲಿ 13 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 40 ಮಂದಿ ನಿಧನರಾಗಿದ್ದಾರೆ.
ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 11, ಕನಕಪುರ ತಾಲ್ಲೂಕಿನಲ್ಲಿ 12, ಮಾಗಡಿ ತಾಲ್ಲೂಕಿನಲ್ಲಿ 3 ಹಾಗೂ ರಾಮನಗರ ತಾಲ್ಲೂಕಿನಲ್ಲಿ 48 ಜನ ಸೇರಿ ಒಟ್ಟಾರೆ 74 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 2486 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 617, ಕನಕಪುರ 507, ಮಾಗಡಿ 348 ಮತ್ತು ರಾಮನಗರ 1014 ಜನರು ಸೇರಿದ್ದಾರೆ.
ಜಿಲ್ಲೆಯಲ್ಲಿ ದಾಖಲಾಗಿರುವ 3359 ಪ್ರಕರಣಗಳ ಪೈಕಿ 2486 ಜನರು ಗುಣಮುಖರಾಗಿದ್ದಾರೆ, ಇನ್ನೂ 833 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು 833 ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 191, ಕನಕಪುರ 193, ಮಾಗಡಿ 113 ಮತ್ತು ರಾಮನಗರ 336 ಪ್ರಕರಣಗಳು ಸೇರಿವೆ.
ಇಂದು ಹೊಸದಾಗಿ 739 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 29943 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 26274 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 270 ಬಾಕಿ ವರದಿ ಸೇರಿ ಒಟ್ಟು 270 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss