Friday, August 12, 2022

Latest Posts

ರಾಮನಗರ ಜಿಲ್ಲೆಯಲ್ಲಿ 41 ಮಂದಿಗೆ ಕೊರೋನಾ ಪಾಸಿಟಿವ್, 19 ಜನರು ಗುಣಮುಖ

ರಾಮನಗರ:  ಜಿಲ್ಲೆಯಲ್ಲಿ ಚನ್ನಪಟ್ಟಣ 4, ಕನಕಪುರ 10 ಮತ್ತು ರಾಮನಗರ 27 ಪ್ರಕರಣಗಳು ಸೇರಿ ಒಟ್ಟು 41 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.
ಒಟ್ಟು ಪ್ರಕರಣ: ಇದುವರೆಗೆ ಜಿಲ್ಲೆಯಲ್ಲಿ 666 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 147, ಕನಕಪುರ 134, ಮಾಗಡಿ 182 ಮತ್ತು ರಾಮನಗರ 203 ಪ್ರಕರಣಗಳು ಸೇರಿವೆ.
ಜಿಲ್ಲೆಯಲ್ಲಿ 19 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 4, ಕನಕಪುರ 2, ಮಾಗಡಿ 4 ಮತ್ತು ರಾಮನಗರ 9 ಜನರು ಸೇರಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 329 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 51, ಕನಕಪುರ 94, ಮಾಗಡಿ 98 ಮತ್ತು ರಾಮನಗರ 86 ಜನರು ಸೇರಿದ್ದಾರೆ.
ಜಿಲ್ಲೆಯಲ್ಲಿ ದಾಖಲಾಗಿರುವ 666 ಪ್ರಕರಣಗಳ ಪೈಕಿ 329 ಜನರು ಗುಣಮುಖರಾಗಿದ್ದಾರೆ, ಇನ್ನೂ 324 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 96, ಕನಕಪುರ 39, ಮಾಗಡಿ 75 ಮತ್ತು ರಾಮನಗರ 114 ಪ್ರಕರಣಗಳು ಸೇರಿವೆ.
ಕನಕಪುರ ತಾಲ್ಲೂಕಿನಲ್ಲಿ ಒಬ್ಬರು, ಮಾಗಡಿ ತಾಲ್ಲೂಕಿನಲ್ಲಿ 9 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 3 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 13 ಮಂದಿ ನಿಧನರಾಗಿದ್ದಾರೆ.
ಜಿಲ್ಲಾ ಆರೋಗ್ಯ ಇಲಾಖೆ ವರದಿ: ಕೋವಿಡ್ ನಿಯಂತ್ರಣಕ್ಕೆ ಸಂಬoಧಿಸಿದoತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 14645 (ಹೊಸದಾಗಿ 180 ಸೇರಿ). ಒಟ್ಟು 6087 ಜನ 14 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 174 ಜನರು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ 4236ಗೆ ಏರಿಕೆಯಾಗಿದೆ.
ಜ್ವರ ತಪಾಸಣಾ ಕೇಂದ್ರದಲ್ಲಿ 8 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 3923 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.
ಒಟ್ಟು 9 ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸಟ್ಯೂಷನಲ್ ಕ್ವಾರಂಟೈನ್ ಗೆ ಇಂದು 4 ಜನರು ಸೇರಿದ್ದಾರೆ. ಒಟ್ಟಾರೆ ಇನ್ಸ್ಟ್ಯೂಷನಲ್ ಕ್ವಾರೆಂಟೈನ್ ಸಂಖ್ಯೆ 158ಕ್ಕೆ ಏರಿಕೆಯಾಗಿದೆ.
ಹೊಸದಾಗಿ 180 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 15200 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 13185 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. 180 ಬಾಕಿ ವರದಿ ಸೇರಿ ಒಟ್ಟು 1088 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss