Monday, August 15, 2022

Latest Posts

ರಾಮನಗರ ಜಿಲ್ಲೆಯಲ್ಲಿ 54 ಕೊರೋನಾ ಪ್ರಕರಣ ದೃಢ , 42 ಜನರು ಗುಣಮುಖ

ರಾಮನಗರ:  ಜಿಲ್ಲೆಯಲ್ಲಿ ಚನ್ನಪಟ್ಟಣ ೨೫, ಕನಕಪುರ ೧೨, ಮಾಗಡಿ ೦೨ ಮತ್ತು ರಾಮನಗರ ೧೫ ಪ್ರಕರಣಗಳು ಸೇರಿ ಇಂದು ಒಟ್ಟು ೫೪ ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-೧೯ ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.
ಒಟ್ಟು ಪ್ರಕರಣ: ಇದುವರೆಗೆ ಜಿಲ್ಲೆಯಲ್ಲಿ ೨೮೭೮ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ ೭೨೦, ಕನಕಪುರ ೬೧೫, ಮಾಗಡಿ ೪೨೨ ಮತ್ತು ರಾಮನಗರ ೧೧೨೧ ಪ್ರಕರಣಗಳು ಸೇರಿವೆ.
ಸಾವು: ಇಂದು ರಾಮನಗರ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ ೬, ಕನಕಪುರ ತಾಲ್ಲೂಕಿನಲ್ಲಿ ೮, ಮಾಗಡಿ ತಾಲ್ಲೂಕಿನಲ್ಲಿ ೧೧ ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ ೧೦ ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ೩೫ ಮಂದಿ ನಿಧನರಾಗಿದ್ದಾರೆ.
ಗುಣಮುಖ : ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ ೧೪, ಕನಕಪುರ ತಾಲ್ಲೂಕಿನಲ್ಲಿ ೬, ಮಾಗಡಿ ತಾಲ್ಲೂಕಿನಲ್ಲಿ ೦೭ ಹಾಗೂ ರಾಮನಗರ ತಾಲ್ಲೂಕಿನಲ್ಲಿ ೧೫ ಜನ ಸೇರಿ ಒಟ್ಟಾರೆ ೪೨ ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ೧೯೧೦ ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ ೪೫೦, ಕನಕಪುರ ೪೧೨, ಮಾಗಡಿ ೩೦೬ ಮತ್ತು ರಾಮನಗರ ೭೪೨ ಜನರು ಸೇರಿದ್ದಾರೆ.
ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ದಾಖಲಾಗಿರುವ ೨೮೭೮ ಪ್ರಕರಣಗಳ ಪೈಕಿ ೧೯೧೦ ಜನರು ಗುಣಮುಖರಾಗಿದ್ದಾರೆ, ಇನ್ನೂ ೯೩೩ ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು ೯೩೩ ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ ೨೬೪, ಕನಕಪುರ ೧೯೫, ಮಾಗಡಿ ೧೦೫ ಮತ್ತು ರಾಮನಗರ ೩೬೯ ಪ್ರಕರಣಗಳು ಸೇರಿವೆ.
ಜಿಲ್ಲಾ ಆರೋಗ್ಯ ಇಲಾಖೆ ವರದಿ : ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಬುಧವಾರ (ಆ. ೨೬) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೨೬೬೨೪ (ಹೊಸದಾಗಿ ಇಂದಿನ ೫೭೯ ಸೇರಿ).
ಜ್ವರ ತಪಾಸಣೆ: ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು ೧೦೨ ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ ೫೨೧೫ ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.
ಕ್ವಾರಟೈನ್: ಒಟ್ಟು ೭ ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸ್ಟ್ಯೂಷನಲ್ ಕ್ವಾರೆಂಟೈನ್ ಸಂಖ್ಯೆ ೭೧ಕ್ಕೆ ಏರಿಕೆಯಾಗಿದೆ.
ಮಾದರಿ ಸಂಗ್ರಹ: ಇಂದು ಹೊಸದಾಗಿ ೫೭೯ ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು ೨೬೮೮೩ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು ೨೨೯೭೨ ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ ೩೮೬ ಬಾಕಿ ವರದಿ ಸೇರಿ ಒಟ್ಟು ೯೯೮ ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss