Thursday, June 30, 2022

Latest Posts

ರಾಮನಗರ ಜಿಲ್ಲೆಯಲ್ಲಿ 76 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ದೃಢ

ರಾಮನಗರ: ಜಿಲ್ಲೆಯಲ್ಲಿ ಚನ್ನಪಟ್ಟಣ 30, ಕನಕಪುರ 20, ಮಾಗಡಿ 4 ಮತ್ತು ರಾಮನಗರ 22 ಪ್ರಕರಣಗಳು ಸೇರಿ
ಒಟ್ಟು 76 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.
ಒಟ್ಟು ಪ್ರಕರಣ: ಇದುವರೆಗೆ ಜಿಲ್ಲೆಯಲ್ಲಿ 2050 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 458, ಕನಕಪುರ 417, ಮಾಗಡಿ 332 ಮತ್ತು ರಾಮನಗರ 843 ಪ್ರಕರಣಗಳು ಸೇರಿವೆ.
ಸಾವು: ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಬ್ಬರು ಹಾಗೂ ರಾಮನಗರ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 3, ಕನಕಪುರ ತಾಲ್ಲೂಕಿನಲ್ಲಿ 5, ಮಾಗಡಿ ತಾಲ್ಲೂಕಿನಲ್ಲಿ 9 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 7 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 24 ಮಂದಿ ನಿಧನರಾಗಿದ್ದಾರೆ.
ಗುಣಮುಖ: ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 21, ಕನಕಪುರ ತಾಲ್ಲೂಕಿನಲ್ಲಿ 12 ಹಾಗೂ ರಾಮನಗರ ತಾಲ್ಲೂಕಿನಲ್ಲಿ 30 ಜನ ಸೇರಿ ಒಟ್ಟಾರೆ 63 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 1394 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 311, ಕನಕಪುರ 285, ಮಾಗಡಿ 269 ಮತ್ತು ರಾಮನಗರ 529 ಜನರು ಸೇರಿದ್ದಾರೆ.
ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ದಾಖಲಾಗಿರುವ 2050 ಪ್ರಕರಣಗಳ ಪೈಕಿ 1394 ಜನರು ಗುಣಮುಖರಾಗಿದ್ದಾರೆ, ಇನ್ನೂ 632 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು 632 ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 144, ಕನಕಪುರ 127, ಮಾಗಡಿ 54 ಮತ್ತು ರಾಮನಗರ 307 ಪ್ರಕರಣಗಳು ಸೇರಿವೆ.
ಜಿಲ್ಲಾ ಆರೋಗ್ಯ ಇಲಾಖೆ ವರದಿ: ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 21050 (ಹೊಸದಾಗಿ 352 ಸೇರಿ). ಒಟ್ಟು 10915 ಜನ 14 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 311 ಜನರು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ 5759ಗೆ ಏರಿಕೆಯಾಗಿದೆ.
ಜ್ವರ ತಪಾಸಣೆ: ಜ್ವರ ತಪಾಸಣಾ ಕೇಂದ್ರದಲ್ಲಿ 41 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 4494 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.
ಕ್ವಾರAಟೈನ್ : ಒಟ್ಟು 13 ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಒಟ್ಟಾರೆ ಇನ್ಸ್ಟ್ಯೂಷನಲ್ ಕ್ವಾರೆಂಟೈನ್ ಸಂಖ್ಯೆ 1ಕ್ಕೆ ಇಳಿಕೆಯಾಗಿದೆ.
ಮಾದರಿ ಸಂಗ್ರಹ: ಹೊಸದಾಗಿ 352 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 21604 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 18863 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. 149 ಬಾಕಿ ವರದಿ ಸೇರಿ ಒಟ್ಟು 430 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss