Sunday, July 3, 2022

Latest Posts

ರಾಮನಗರ ಜಿಲ್ಲೆಯಲ್ಲಿ 84 ಕೊರೋನಾ ಪಾಸಿಟಿವ್ ಪ್ರಕರಣ ದೃಢ, 76 ಜನರು ಗುಣಮುಖ

ರಾಮನಗರ: ಜಿಲ್ಲೆಯಲ್ಲಿ ಚನ್ನಪಟ್ಟಣ 16, ಕನಕಪುರ 20, ಮಾಗಡಿ 16 ಮತ್ತು ರಾಮನಗರ 32 ಪ್ರಕರಣಗಳು ಸೇರಿ ಇಂದು ಒಟ್ಟು 84 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.
ಒಟ್ಟು ಪ್ರಕರಣ : ಇದುವರೆಗೆ ಜಿಲ್ಲೆಯಲ್ಲಿ 4347 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1026, ಕನಕಪುರ 896, ಮಾಗಡಿ 658 ಮತ್ತು ರಾಮನಗರ 1767 ಪ್ರಕರಣಗಳು ಸೇರಿವೆ.
ಸಾವು : ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 12, ಕನಕಪುರ ತಾಲ್ಲೂಕಿನಲ್ಲಿ 11, ಮಾಗಡಿ ತಾಲ್ಲೂಕಿನಲ್ಲಿ 14 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 15 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 52 ಮಂದಿ ನಿಧನರಾಗಿದ್ದಾರೆ.
ಗುಣಮುಖ: ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 14, ಕನಕಪುರ ತಾಲ್ಲೂಕಿನಲ್ಲಿ 17, ಮಾಗಡಿ ತಾಲ್ಲೂಕಿನಲ್ಲಿ 13 ಹಾಗೂ ರಾಮನಗರ ತಾಲ್ಲೂಕಿನಲ್ಲಿ 32 ಜನ ಸೇರಿ ಒಟ್ಟಾರೆ 76 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 3459 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 842, ಕನಕಪುರ 700, ಮಾಗಡಿ 439 ಮತ್ತು ರಾಮನಗರ 1478 ಜನರು ಸೇರಿದ್ದಾರೆ.
ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ದಾಖಲಾಗಿರುವ 4347 ಪ್ರಕರಣಗಳ ಪೈಕಿ 3459 ಜನರು ಗುಣಮುಖರಾಗಿದ್ದಾರೆ, ಇನ್ನೂ 836 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು 836 ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 172, ಕನಕಪುರ 185, ಮಾಗಡಿ 205 ಮತ್ತು ರಾಮನಗರ 274 ಪ್ರಕರಣಗಳು ಸೇರಿವೆ.
ಜಿಲ್ಲಾ ಆರೋಗ್ಯ ಇಲಾಖೆ ವರದಿ: ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಶುಕ್ರವಾರ (ಸೆ. 11) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 37835 (ಹೊಸದಾಗಿ ಇಂದಿನ 729 ಸೇರಿ).
ಜ್ವರ ತಪಾಸಣೆ: ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು 65 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 6619 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.
ಮಾದರಿ ಸಂಗ್ರಹ: ಇಂದು ಹೊಸದಾಗಿ 729 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 38094 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 33379 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 316 ಬಾಕಿ ವರದಿ ಸೇರಿ ಒಟ್ಟು 316 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು .

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss