Sunday, June 26, 2022

Latest Posts

ರಾಮನಗರ ಜಿಲ್ಲೆಯಲ್ಲಿ 94 ಕೊರೋನಾ ಪಾಸಿಟಿವ್ ಪ್ರಕರಣ ದೃಢ, ಒಂದು ಸಾವು

ರಾಮನಗರ: ಜಿಲ್ಲೆಯಲ್ಲಿ ಚನ್ನಪಟ್ಟಣ 19, ಕನಕಪುರ 18, ಮಾಗಡಿ 12 ಮತ್ತು ರಾಮನಗರ 45 ಪ್ರಕರಣಗಳು ಸೇರಿ ಇಂದು ಒಟ್ಟು 94 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.
ಒಟ್ಟು ಪ್ರಕರಣ : ಇದುವರೆಗೆ ಜಿಲ್ಲೆಯಲ್ಲಿ 4128 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 985, ಕನಕಪುರ 844, ಮಾಗಡಿ 622 ಮತ್ತು ರಾಮನಗರ 1677 ಪ್ರಕರಣಗಳು ಸೇರಿವೆ.
ಸಾವು : ಇಂದು ಮಾಗಡಿ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 12,
ಕನಕಪುರ ತಾಲ್ಲೂಕಿನಲ್ಲಿ 11, ಮಾಗಡಿ ತಾಲ್ಲೂಕಿನಲ್ಲಿ 14 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 15 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 52 ಮಂದಿ ನಿಧನರಾಗಿದ್ದಾರೆ.
ಗುಣಮುಖ : ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 20, ಕನಕಪುರ ತಾಲ್ಲೂಕಿನಲ್ಲಿ 16, ಮಾಗಡಿ ತಾಲ್ಲೂಕಿನಲ್ಲಿ 12 ಹಾಗೂ ರಾಮನಗರ ತಾಲ್ಲೂಕಿನಲ್ಲಿ 33 ಜನ ಸೇರಿ ಒಟ್ಟಾರೆ 81 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 3121 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 773, ಕನಕಪುರ 633, ಮಾಗಡಿ 396 ಮತ್ತು ರಾಮನಗರ 1319 ಜನರು ಸೇರಿದ್ದಾರೆ.
ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ದಾಖಲಾಗಿರುವ 4128 ಪ್ರಕರಣಗಳ ಪೈಕಿ 3121 ಜನರು ಗುಣಮುಖರಾಗಿದ್ದಾರೆ, ಇನ್ನೂ 955 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು 955 ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 200, ಕನಕಪುರ 200, ಮಾಗಡಿ 212 ಮತ್ತು ರಾಮನಗರ 343 ಪ್ರಕರಣಗಳು ಸೇರಿವೆ.
ಜಿಲ್ಲಾ ಆರೋಗ್ಯ ಇಲಾಖೆ ವರದಿ : ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಬುಧವಾರ (ಸೆ. 9) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 36327 (ಹೊಸದಾಗಿ ಇಂದಿನ 791 ಸೇರಿ).
ಜ್ವರ ತಪಾಸಣೆ: ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು 80 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 6490 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.
ಮಾದರಿ ಸಂಗ್ರಹ: ಇಂದು ಹೊಸದಾಗಿ 419 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 32046 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 32046 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 360 ಬಾಕಿ ವರದಿ ಸೇರಿ ಒಟ್ಟು 360 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss