Saturday, July 2, 2022

Latest Posts

ರಾಮನಗರ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಶುಕ್ರವಾರ ಆಚರಣೆ

ರಾಮನಗರ: ರಾಮನಗರ ಜಿಲ್ಲೆಯನ್ನು ಸ್ವಚ್ಛ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಹಮ್ಮಿಕೊಳ್ಳಲಾಗಿರುವ ಸ್ವಚ್ಛ ಶುಕ್ರವಾರ ಅಭಿಯಾನದಡಿ ೧೨೭ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸ್ವಚ್ಛತಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ನಡೆಸಲು ಪಂಚಾಯತಿಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ, ಯೋಜನಾ ನಿರ್ದೇಶಕರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಪ್ಲಾಸ್ಟಿಕ್ ಬಳಕೆ ಮಾಡದಂತೆ ಜನರಿಗೆ ಜಾಗೃತಿ ಮೂಡಿಸುವುದು, ಕಸ ವಿಲೇವಾರಿಯನ್ನು ಸರಿಯಾದ ರೀತಿಯಲ್ಲಿ ಕೈಗೊಳ್ಳುವುದು ಇದರ ಮುಖ್ಯ ಉದ್ದೇಶವಾಗಿದೆ.
ಸ್ವಚ್ಛತೆಯನ್ನು ರೂಢಿಸಿಕೊಂಡರೆ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಬಹುದು ಹಾಗೂ ಪರಿಸರ ಕೂಡ ಉತ್ತಮಗೊಳ್ಳುತ್ತದೆ. ಸ್ವಚ್ಛತೆಗೆ ಆದ್ಯತೆ ನೀಡಿವುದರಿಂದ ಗ್ರಾಮೀಣ ಭಾಗದ ಬಹಳಷ್ಟು ಸಮಸ್ಯೆ ಪರಿಹಾರವಾಗುತ್ತದೆ ಎಂಬ ದೃಷ್ಠಿಯಿಂದ ಸ್ವಚ್ಛ ಶುಕ್ರವಾರ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss