Wednesday, August 17, 2022

Latest Posts

ರಾಮನಗರ: ಜೆಡಿಎಸ್ ತೊರೆದು‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ರಾಮನಗರ:- ಜೆಡಿಎಸ್‌ನಲ್ಲಿರುವ ಹುಸಿರು ಕಟ್ಟುವ ವಾತವಾರಣದಿಂದ ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರು ಬಿಜೆಪಿಯತ್ತ ಬರುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜ್ ಹೇಳಿದ್ದರು.

ನಗರದ ಕೆಂಪೇಗೌಡ ಸರ್ಕಲ್‌ನ ಬಳಿ ಇರುವ ಮನೆಯೊಂದರಲ್ಲಿ ನಡೆದ ಸರಳ ಸಮಾರಂಭದಲ್ಲಿ ಜೆಡಿಎಸ್ ಮಹಿಳಾ ಕಾರ್ಯಕರ್ತರನ್ನ ಬಿಜೆಪಿಗೆ ಸೇರ್ಪಡೆ ಮಾಡಿಕೊಂಡ ನಂತರ ಮಾತನಾಡಿದ ಅವರು ಬಿಜೆಪಿ ಪಕ್ಷ ರಾಜ್ಯದಲ್ಲಿ ಮತ್ತು ದೇಶದಲ್ಲಿ ಪಕ್ಷ ಸದೃಢವಾಗುತ್ತಿರುವುದರಿಂದ ಬೇರೆ ಪಕ್ಷಗಳಿಂದ ನಮ್ಮ ಪಕ್ಷದತ್ತ ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಸಿ.ಪಿ.ಯೋಗೇಶ್ವರ್ ಹಾಗೂ ಪಕ್ಷ ಮುಖಂಡರುಗಳ ನೇತೃತ್ವದಲ್ಲಿ ಪ್ರಬಲವಾಗಿ ಸಂಘಟನೆ ಮಾಡುತ್ತೇವೆ ಎಂದರು.

ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಪುಷ್ಪಲತಾ ಆರಾಧ್ಯ ಮಾತನಾಡಿ ಜೆಡಿಎಸ್ ಪಕ್ಷದಲ್ಲಿ ಸುಮಾರು ವರ್ಷಗಳಿಂದ ದುಡಿಯುತ್ತ ಬಂದರು ನಮ್ಮನ್ನು ಕಡೆಗಣಿಸುತಲೇ ಬಂದಿದ್ದಾರೆ. ಆದ್ದರಿಂದ ಬೆಸುತ್ತು ದೇಶದ ಆಶಾಕಿರಣವಾದ ಬಿಜೆಪಿ ಸೇರ್ಪಡೆಯಾಗಿದ್ದೇವೆ ಎಂದರು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಕಾರ್ಯದರ್ಶಿ ಜಯಶೀಲಾ, ನಾಗಮ್ಮ, ಲಕ್ಷಿö್ಮ ,ಮಂಜುಳ, ರಾಧ ಇವರುಗಳು ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರದೇವರು, ಜಿಲ್ಲಾ ಮಾಧ್ಯಮ ಪ್ರಮುಖ ಚಂದ್ರಶೇಖರ್ ರೆಡ್ಡಿ, ನಗರ ಘಟಕದ ಅಧ್ಯಕ್ಷ ಪಿ.ಶಿವಾನಂದ, ಯುವ ಮುಖಂಡರುಗಳಾದ ಡಿ.ನೆರೇಂದ್ರ, ದರ್ಶನ್ ರೆಡ್ಡಿ, ಮಾದಪುರದ ಜಗದೀಶ್, ಮಾಜಿ ನಗರಘಟಕದ ಅಧ್ಯಕ್ಷ ರಾಮಾಂಜುನೇಯ, ತಾಲ್ಲೂಕು ಅಧ್ಯಕ್ಷ ಗೋಪಾಲ್, ವಿನೋದ್ ಮುಂತಾದವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!