ರಾಮನಗರ: ಬೆಂಗಳೂರಿನ ಕೆ.ಜಿ ಹಳ್ಳಿ ಗಲಭೆ ಸಂಬAಧ ಸುದ್ದಿಗೆ ತೆರಳಿದ್ದ ಪ್ರರ್ತಕರ್ತರ ಮೇಲೆ ಪುಂಡರು ಹಲ್ಲೆ ಮಾಡಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ರಾಮನಗರ ಜಿಲ್ಲಾ ಪೊಲೀಸ್ ಭವನದ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳವಾರ ರಾತ್ರಿ ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆಯ ಚಿತ್ರೀಕರಣ ಮಾಡುತ್ತಿದ್ದ ಖಾಸಗಿ ವಾಹಿನಿಯ ಕ್ಯಾಮರಾಮೆನ್ ಹಾಗೂ ವರದಿಗಾರರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು, ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳ ಮೇಲಿನ ಹಲ್ಲೆ ಸಾಮಾನ್ಯವಾಗಿದ್ದು, ಅತಂಹ ಪುಂಡರ ವಿರುದ್ಧ ಸರ್ಕಾರವು ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಪ್ರಜಾಪ್ರಭುತ್ವದ ನಾಲ್ಕನೆಯ ಅಂಗ ಎಂದು ಕರೆಯುವ ಪತ್ರಿಕಾರಂಗ ಇಂದು ನಿರ್ಭೀತಿಯಿಂದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ, ಹಾಗಾಗಿ ಗಲಭೆ ಸುದ್ದಿ ಮಾಡುತ್ತಿದ್ದ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸುವ ಜೊತೆಗೆ ಪತ್ರಕರ್ತರರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ವಿವಿಧ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿದರು.
ಇನ್ನು ಜಿಲ್ಲಾ ಪೊಲೀಸ್ ಭವನದ ಮೆಟ್ಟಿಲುಗಳ ಮುಂದೆ ಕೆಲ ಹೊತ್ತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿಯವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರುನಾಡ ಸೇನೆ ಜಗದೀಶ್, ಗಾಯಿತ್ರಿ ಬಾಯಿ ಮತ್ತು ಎಲ್ಲಾ ಪತ್ರಕರ್ತರು ಹಾಜರಿದ್ದರು.