Saturday, June 25, 2022

Latest Posts

ರಾಮನಗರ| ಫೆ.8 ರಿಂದ ಜಿಲ್ಲೆಯಲ್ಲಿ 2ನೇ ಹಂತದ ಕೋವಿಡ್ ಲಸಿಕೆ

ಹೊಸದಿಗಂತ ವರದಿ, ರಾಮನಗರ:

ಜಿಲ್ಲೆಯಲ್ಲಿ ಫೆಬ್ರವರಿ 8 ರಿಂದ 2 ನೇ ಹಂತದ ಕೋವಿಡ್ ಲಸಿಕೆ ನೀಡುವ ಕಾರ್ಯ ಪ್ರಾರಂಭವಾಗಲಿದ್ದು, ತಾಲ್ಲೂಕಿನ ತಹಶೀಲ್ದಾರ್ ಹಾಗೂ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದರು.

ಅವರು ಶನಿವಾರ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಆರೋಗ್ಯ ಸುರಕ್ಷತಾ ಸಮಿತಿ ಸಭೆ ನಡೆಸಿ ಮಾತನಾಡಿದರು.

ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಅವರಿಗೆ ಲಸಿಕೆ ನೀಡಲಾಗಿದೆ. 2 ನೇ ಹಂತದಲ್ಲಿ ಗೃಹ ಇಲಾಖೆಯ ಪೊಲೀಸ್, ಹೋಂ ಗಾಡ್ರ‍್ಸ್, ಕಂದಾಯ, ಪಂಚಾಯತ್ ರಾಜ್ ಮತ್ತು ನಗರಾಭಿವೃದ್ಧಿ ಇಲಾಖೆಯ ಸಿಬ್ಬಂದಿಗಳಿಗೆ ನೀಡಲಾಗುವುದು. ಈಗಾಗಲೇ ಹೆಸರನ್ನು ನೊಂದಣಿ ಮಾಡಿಕೊಂಡವರಿಗೆ ಲಸಿಕೆ ನೀಡಲಾಗುವುದು ಎಂದರು.

ಮೊದಲ ಹಂತದಲ್ಲಿ ನೊಂದಣಿಯಾದ 8737 ಆರೋಗ್ಯ ಕಾರ್ಯಕರ್ತರಲ್ಲಿ 5958 ಜನರು ಲಸಿಕೆ ಪಡೆದುಕೊಂಡಿರುತ್ತಾರೆ. ಎರಡನೇ ಹಂತದದಲ್ಲಿ  ಕಂದಾಯ ಇಲಾಖೆಯಿಂದ- 613, ಪಂಚಾಯತ್ ರಾಜ್ ಇಲಾಖೆಯಿಂದ-1699, ಗೃಹ ಇಲಾಖೆಯಲ್ಲಿ ಹೋಂ ಗಾರ್ಡ್ಸ, ಪೊಲೀಸ್ ಹಾಗೂ ಕರಾಗೃಹ ಸೇರಿದಂತೆ- 1363 ಹಾಗೂ ನಗರಾಭಿವೃದ್ಧಿಯಿಂದ 727 ಸೇರಿ ಒಟ್ಟು 4402 ಜನರು ಲಸಿಕೆ ಪಡೆಯಲು ಹೆಸರು ನೊಂದಾಯಿಸಿಕೊಂಡಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್,  ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಶಿಧರ್, ಡಿವೈಎಸ್‌ಪಿ ಪುರುಷೋತ್ತಮ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss