Sunday, April 11, 2021

Latest Posts

ರಾಮಮಂದಿರಕ್ಕೆ ಜನರೇ ಸ್ವಯಂ ಪ್ರೇರಣೆಯಿಂದ ದೇಣಿಗೆ ನೀಡುತ್ತಿರುವಾಗ ನಿಮ್ಮ ಸಮಸ್ಯೆ ಏನು?: ವಿರೋಧ ಪಕ್ಷಕ್ಕೆ ಸಿಎಂ ಪ್ರಶ್ನೆ

ಹೊಸದಿಗಂತ ವರದಿ, ಶಿವಮೊಗ್ಗ:

ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಜನರೇ ಸ್ವಯಂ ಪ್ರೇರಣೆಯಿಂದ ದೇಣಿಗೆ ನೀಡುತ್ತಿದ್ದು, ವಿರೋಧ ಪಕ್ಷದವರು ಇದಕ್ಕೆ ಕಲ್ಲು ಹಾಕುವ ಕೆಲಸ ಮಾಡಬಾರದೆಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಇಲ್ಲಿನ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಿಂದೂ, ಕ್ರೈಸ್ತ, ಮುಸಲ್ಮಾನರು ಸೇರಿದಂತೆ ಎಲ್ಲರೂ ದೇಣಿಗೆ ನೀಡುತ್ತಿದ್ದಾರೆ. ಇದನ್ನು ಸಹಿಸದ ವಿರೋಧ ಪಕ್ಷದ ನಾಯಕರು ವಿರುದ್ಧವಾಗಿ ಹೇಳಿಕೆ ನೀಡುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡುವುದು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧದ ಹೇಳಿಕೆಯಾಗಲಿದೆ ಎಂಬುದನ್ನು ತಿಳಿದುಕೊಳ್ಳಬೇಕಿದೆ ಎಂದರು.

ಇದರ ಬಗ್ಗೆ ವಿರೋಧ ಪಕ್ಷದ ನಾಯಕರು ಟೀಕೆ ಟಿಪ್ಪಣಿ ಮಾಡದೆ ನಿಮಗೆ ಇಷ್ಟವಿದ್ದರೆ ನೆರವು ನೀಡಿ. ಸುಮ್ಮನೆ ಕಲ್ಲು ಹಾಕುವ ಕೆಲಸ ಮಾಡಬೇಡಿ ಎಂದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಚೇನಹಳ್ಳಿ ಕೈಗಾರಿಕೆ ಪ್ರದೇಶದ ಸಂಘದ ವತಿಯಿಂದ ಸಂಗ್ರಹಿಸಿದ್ದ 70 ಲಕ್ಷ ರೂ. ದೇಣಿಗೆಯನ್ನು ಮುಖ್ಯಮಂತ್ರಿ ಮೂಲಕ ರಾಮಮಂದಿರ ನಿರ್ಮಾಣ ನಿಧಿಗೆ ಸಮರ್ಪಿಸಲಾಯಿತು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss