Wednesday, August 10, 2022

Latest Posts

ರಾಮ ಮಂದಿರ ನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಸಚಿವ ಶಿವರಾಮ್ ಹೆಬ್ಬಾರ್ ಚಾಲನೆ

ಹೊಸ ದಿಗಂತ ವರದಿ ಯಲ್ಲಾಪುರ:

ಕಾರ್ಮಿಕ ಮತ್ತು ಸಕ್ಕರೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ಗ್ರಾಮದೇವಿ ದೇವಾಲಯದಲ್ಲಿ ಶ್ರೀ ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ರಾಮ ಮಂದಿರ ನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಗ್ರಾಮದೇವಿಗೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕೋಟ್ಯಂತರ ಹಿಂದುಗಳ ಆರಾಧ್ಯದೈವ ಪ್ರಭು ಶ್ರೀ ರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ಮಂದಿರ ನಿರ್ಮಾಣವಾಗುತ್ತಿರುವುದು ಸಂತಸದ ವಿಷಯ ನಾವೆಲ್ಲರೂ ನಿಧಿ ಸಮರ್ಪಣಾ ಅಭಿಯಾನದಲ್ಲಿ ಭಾಗಿಯಾಗಿ ಮಂದಿರ ನಿರ್ಮಾಣ ಕಾರ್ಯದಲ್ಲಿ ಪಾಲ್ಗೊಳ್ಳೋಣ ಎಂದರು.

ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಜುನಾಥ, ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷರಾದ ಎಸ್.ಎನ್.ಭಟ್ ಎಕಾನ್ , ತಾಲೂಕಾಧ್ಯಕ್ಷರಾದ ನಾರಾಯಣ ನಾಯಕ ಪ್ರಮುಖರಾದ ವಿಜಯ ಮಿರಾಶಿ, ಶ್ರೀ ಬಾಲಕೃಷ್ಣ ನಾಯಕ, ಶಿರಿಷ ಪ್ರಭು ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss