Monday, August 8, 2022

Latest Posts

ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ: ಮೈಸೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ

ಮೈಸೂರು: ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿದ ಹಿನ್ನೆಲೆಯಲ್ಲಿ ಮೈಸೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರಿನ ಒಂಟಿಕೊಪ್ಪಲು ರಾಮಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾನಿ,ಮುರುಳಿ ಮನೋಹರ ಜೋಷಿ, ಪ್ರಧಾನಿ ನರೇಂದ್ರ ಮೋದಿ ಹೆಸರನಲ್ಲಿ ವಿಶೇಷ ಅರ್ಚನೆ ಮಾಡಿಸಿ, ದೇವರಿಗೆ ಹಿಡುಗಾಯಿ ಹೊಡೆದು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಇನ್ನಿತರು ಭಾಗಿಯಾಗಿದ್ದರು.
ಮೈಸೂರಿನ ಕಲ್ಯಾಣಗಿರಿಯಲ್ಲಿರುವ ಶ್ರೀಕಲ್ಯಾಣ ಲಕ್ಷಿö್ಮ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಲಾಯಿತು. ಅಲ್ಲದೆ ಭಕ್ತರಿಗೆ ಪ್ರಸಾದವನ್ನು ವಿತರಿಸಲಾಯಿತು. ಈ ವೇಳೆ ದೇವಸ್ಥಾನದ ಸಂಸ್ಥಾಪಕರಾದ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಹೆಚ್.ಜಿ.ಗಿರಿಧರ್ ಮತ್ತಿತರರು ಇದ್ದರು.
ಮೈಸೂರು ಜಿಲ್ಲೆಯ ಬನ್ನೂರಿನಲ್ಲಿರುವ ಹೊಯ್ಸಳರ ಕಾಲದಲ್ಲಿ ನಿರ್ಮಾಣವಾದ ದೇಗುಲ, ಗಂಗರು ಪ್ರತಿಪ್ಠಾಪಿಸಿದ್ದ ಶ್ರೀಕೋದಂಡರಾಮ ದೇವಸ್ಥಾನದಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ೧೨ ನೇ ಶತಮಾನದ ಪುರಾಣ ಪ್ರಸಿದ್ಧ ದೇವಸ್ಥಾನ ಇದಾಗಿದ್ದು ರಾಮನ ಉತ್ಸವ ಮೂರ್ತಿಗೆ ೧೫೦೦ ವರ್ಷಗಳ ಇತಿಹಾಸವಿದೆ. ದೇಗುಲದಲ್ಲಿ ಅರ್ಚಕರಾದ ಕೃಷ್ಣಸ್ವಾಮಿ, ಶ್ರೀನಿವಾಸ್, ಶ್ರೀಕಾಂತ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನಡೆಯಿತು.
ವಿಶೇಷ ಅಲಂಕಾರ, ಪೂಜಾ ಕೈಂಕರ್ಯಗಳಿAದ ಶ್ರೀಕೋದಂಡರಾಮ ಕಂಗೊಳಿಸುತ್ತಿದ್ದು ಸಾಮಾಜಿಕ ಅಂತರ ಕಾಯ್ದುಕೊಂಡು ದೇವಸ್ಥಾನದಲ್ಲಿ ಪೂಜೆ ನಡೆಸಲಾಯಿತು ಭಕ್ತರಿಗೆ ಸ್ಯಾನಿಟೈಸರ್ ನೀಡಿ ಒಳಕ್ಕೆ ಪ್ರವೇಶ ನೀಡಲಾಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss