Thursday, July 7, 2022

Latest Posts

ರಾಮ ಮಂದಿರ ನಿರ್ಮಾಣಕ್ಕೆ ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್

ಹೊಸದಿಲ್ಲಿ: ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಟ್ರಸ್ಟ್ ರಚಿಸಲಾಗಿದೆ.

ಈ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಬೆಳಗ್ಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲರಿಂದ ಅಯೋಧ್ಯೆ ಟ್ರಸ್ಟ್ ರಚನೆಗೆ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಮ ಮಂದಿರ ನಿರ್ಮಾಣ ಸಂಬಂಧ ಸುಪ್ರೀಂ ಕೋರ್ಟ್ ನೀಡಿದ ಆದೇಶದಂತೆ ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಹೆಸರಿನಲ್ಲಿ ಟ್ರಸ್ಟ್ ರಚಿಸಲಾಗಿದೆ. ಇದು ಸಂಪೂರ್ಣ ಸ್ವಾಯತ್ತ ಟ್ರಸ್ಟ್ ಆಗಿ ಕಾರ್ಯ ನಿರ್ವಹಿಸಲಿದೆ ಎಂದರು.

ರಾಮ ಮಂದಿರ ನಿರ್ಮಾಣ ಮಾಡುವ ಸ್ಥಳದ ಪಕ್ಕದಲ್ಲಿಯೇ ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಗೆ ಕೇಂದ್ರ ಸರ್ಕಾರ 67 ಹೆಕ್ಟೇರ್ ಪ್ರದೇಶ ನೀಡಲಿದೆ ಎಂದು ಘೋಷಿಸಿದರು.

ಸುಪ್ರೀಂ ಕೋರ್ಟ್ ಆದೇಶದಂತೆ ಅಯೋಧ್ಯೆಯಲ್ಲಿ ಸುನ್ನಿ ವಕ್ಫ್ ಮಂಡಳಿಗೆ 5 ಎಕರೆ ಜಾಗ ನೀಡುವಂತೆ ಕೇಂದ್ರ ಸರ್ಕಾರ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿದೆ. ಇದಕ್ಕೆ ಉತ್ತರ ಪ್ರದೇಶ ಸರ್ಕಾರ ಕೂಡ ಒಪ್ಪಿಗೆ ಸೂಚಿಸಿದೆ ಎಂದು ಮೋದಿ ತಿಳಿಸಿದರು.

ಕಳೆದ ವರ್ಷ ನವೆಂಬರ್ ನಲ್ಲಿ ಸುಪ್ರೀಂಕೋರ್ಟ್ ವಿವಾದಿತ ಜಾಗ ರಾಮ್ ಲಲ್ಲಾಗೆ ಸೇರಿದ್ದು ಎಂದು ತೀರ್ಪು ನೀಡಿತ್ತು. ಜೊತೆಗೆ ಟ್ರಸ್ಟ್ ಮೂಲಕ ರಾಮ ಮಂದಿರ ನಿರ್ಮಾಣ ಮಾಡಬೇಕೆಂದು ಆದೇಶಿಸಿತ್ತು. ಇದರೊಂದಿಗೆ ಸುನ್ನಿ ವಕ್ಫ್ ಬೋರ್ಡ್ ಗೆ ಉತ್ತರ ಪ್ರದೇಶದ ಪ್ರಮುಖ ಸ್ಥಳದಲ್ಲಿ 5 ಎಕರೆ ನೀಡುವಂತೆ ಸೂಚಿಸಿತ್ತು. ತೀರ್ಪು ಪ್ರಕಟಗೊಂಡು ಮೂರು ತಿಂಗಳೊಳಗಾಗಿ ಕೇಂದ್ರ ಸರ್ಕಾರ ಟ್ರಸ್ಟ್ ರಚಿಸಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿದ್ದರ ಹಿನ್ನೆಲೆಯಲ್ಲಿ ಸರ್ಕಾರದಿಂದ ಟ್ರಸ್ಟ್ ರಚಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss