ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಿಂದ ಕನಿಷ್ಠ 12 ಮೃತದೇಹಗಳನ್ನು ಅವಶೇಷಗಳಿಂದ ಹೊರ ತೆಗೆಯಲಾಗಿದ್ದು, ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಖಲಾಪುರ್ ತಹಸಿಲ್ನ ಇರ್ಶಲವಾಡಿ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತದಿಂದ 12 ಮಂದಿ ಸಾವನ್ನಪ್ಪಿದ್ದು, ಒಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಪರಿಶೀಲಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಥಳಕ್ಕೆ ಆಗಮಿಸಿದ್ದು, ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಕೂಡಾ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಭೂ ಕುಸಿತದಿಂದ ಸುಮಾರು 48 ಕುಟುಂಬಗಳಿಗೆ ಹಾನಿಯಾಗಿದೆ ಎನ್ನಲಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಮಹಾರಾಷ್ಟ್ರ ಸರ್ಕಾರ ಭರಿಸಲಿದೆ ಎಂದು ಅವರು ಹೇಳಿದ್ದಾರೆ.
Maharashtra | 12 bodies have been retrieved from the debris in Irshalwadi, Raigad; also one rescuer died of cardiac arrest. Total 13 deaths till now: Police https://t.co/D8nIawScIG
— ANI (@ANI) July 20, 2023
#WATCH | Maharashtra: Visuals from Irshalwadi village of Khalapur tehsil of Raigad district where rescue operation is underway after a landslide occurred here. pic.twitter.com/NN7x0PiQve
— ANI (@ANI) July 20, 2023