ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಸಿರವಾರದಲ್ಲಿ ನಡೆದಿದೆ.
ವೆಂಕಟೇಶ್ ನಾಯಕ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಧಾರವಾಡದಲ್ಲಿ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದು, ಇತ್ತೀಚಿಗೆ ಊರಿಗೆ ಬಂದಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ಯಾರೂ ಜವಾಬ್ದಾರರಲ್ಲ, ಹೊಣೆಗಾರರಲ್ಲ ಎಂದು ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾನೆ.