Wednesday, August 17, 2022

Latest Posts

ರಾಯಣ್ಣ ಪುತ್ಥಳಿ ಮರುಸ್ಥಾಪನೆ ವಿವಾದ ಇತ್ಯರ್ಥ: ಅಭಿಮಾನಿಗಳು ‌ಗುರುತಿಸಿದ್ದ ಜಾಗದಲ್ಲೇ ಮೂರ್ತಿ!

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪುತ್ಥಳಿ ಮರುಸ್ಥಾಪನೆ ವಿವಾದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ಎಡಿಜಿಪಿ ಅಮರಕುಮಾರ್ ಪಾಂಡೆ ನೇತೃತ್ವದಲ್ಲಿ ನಡೆದ ಸುದೀರ್ಘ ಸಂಧಾನ ಸಭೆ ಮೂಲಕ ಇತ್ಯರ್ಥಗೊಂಡಿದೆ.
ಅಭಿಮಾನಿಗಳು ‌ಗುರುತಿಸಿದ್ದ ಜಾಗದಲ್ಲೇ ಸಂಗೊಳ್ಳಿ ರಾಯಣ್ಣ ಮೂರ್ತಿ ರಾರಾಜಿಸಲಿದೆ.ರಾಯಣ್ಣನ ಅಭಿಮಾನಿಗಳು ಹಾಗೂ ಕನ್ನಡ ಸಂಘಟನೆ ಮುಖಂಡರು ಗುರುತಿಸಿದ್ದ ಜಾಗದಲ್ಲೇ ರಾಯಣ್ಣ ಮೂರ್ತಿ ಪ್ರತಿಷ್ಠಾಪಿಸಲು ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು. ಆದರೆ ಪೀರನವಾಡಿ ವೃತ್ತಕ್ಕೆ ಶಿವಾಜಿ ಸರ್ಕಲ್ ಎಂದು ಹೆಸರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದಕ್ಕೆ ಉಭಯ ಬಣದ ಮುಖಂಡರು ಸಮ್ಮತಿ ಸೂಚಿಸಿದ್ದಾರೆ.
ಈ ಬಗ್ಗೆ ರಾಜ್ಯ ಸರ್ಕಾರದಿಂದ ನೋಟಿಫಿಕೇಶನ್ ಹೊರಡಿಸಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ಸಭೆಗೆ ಭರವಸೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!