ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಲಾಕ್ ಡೌನ್ ವಿಧಿಸುವ ಅಗತ್ಯವಿಲ್ಲ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಕೊರೋನಾ ತನ್ನ ಆರ್ಭಟವನ್ನು ಹೆಚ್ಚಾಗಿದ್ದು, ಈಗಾಗಲೇ 3ನೇ ಅಲೆಯು ಉತ್ತುಂಗಕ್ಕೆ ಏರಿಕೆಯಾಗಿದೆ. ಈಗ ಲಾಕ್ ಡೌನ್ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ಬದಲಿಗೆ ಎಲ್ಲರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಿದರು.
ಮಾಸ್ಕ್ ಧರಿಸದೆ ಇದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ನಿಯಮ ಉಲ್ಲಂಘಿಸಿದವರಿಂದ 45 ಕೋಟಿ ರೂ ದಂಡ ವಿಧಿಸಲಾಗಿದೆ ಎಂದರು.