Thursday, August 11, 2022

Latest Posts

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಪರೀಕ್ಷೆಗಳ ಸಂಖ್ಯೆ ದ್ವಿಗುಣ: ಮುಖ್ಯಮಂತ್ರಿ ಕೇಜ್ರಿವಾಲ್ ಭರವಸೆ

ಹೊಸದಿಲ್ಲಿ: ಕಳೆದ ಕೆಲವು ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಕೊರೋನಾವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಒಂದು ವಾರದಲ್ಲಿ ಪರೀಕ್ಷೆಯನ್ನು ದ್ವಿಗುಣಗೊಳಿಸಲಾಗುವುದು ಎಂಬ ಭರವಸೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿದರು.

ಆಗಸ್ಟ್ 17 ರ ನಂತರ, ಪ್ರಕರಣಗಳು 1200 ರಿಂದ 1400 ರ ನಡುವೆ ಇರುವುದಕ್ಕೆ ನಾವು ಸಾಕ್ಷಿಯಾಗಿದ್ದೇವೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 1,693 ಪ್ರಕರಣಗಳು ದಾಖಲಾಗಿವೆ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದ್ದಾರೆ.

ಪ್ರಕರಣಗಳ ಏರಿಕೆಯನ್ನು ಎದುರಿಸಲು ತಮ್ಮ ಸರ್ಕಾರ ಸಿದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗುವುದು. ದೆಹಲಿ ಪ್ರಸ್ತುತ ಪ್ರತಿದಿನ ಸುಮಾರು 20,000 ಜನರನ್ನು ಪರೀಕ್ಷಿಸುತ್ತಿದೆ, ಇದನ್ನು ಒಂದು ವಾರದಲ್ಲಿ 40,000 ಕ್ಕೆ ಹೆಚ್ಚಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ. ನಾವು ಪರೀಕ್ಷೆಯ ತಂತ್ರವನ್ನು ಅಳವಡಿಸಿಕೊಂಡಿದ್ದೇವೆ ಮತ್ತು ಪ್ರತ್ಯೇಕಿಸುತ್ತೇವೆ ಎಂದರು.

ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಶೇ.90 ಕ್ಕಿಂತ ಹೆಚ್ಚು ಮತ್ತು ಸಾವಿನ ಪ್ರಮಾಣವು ಶೇ.1.4 ರಷ್ಟಿದೆ, ಇದು ದೇಶದ ಅತ್ಯಂತ ಕಡಿಮೆ ಪ್ರಮಾಣವಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss